'ಚಪ್ಪಲಿ ಮನೆ ದೇವರು': ವರದಿಗಾರರೇ.. ಕಪೋಲಕಲ್ಪಿತವಾಗಿ ಬರೆಯಬೇಡಿ, ಪುರಾವೆ ನೀಡಿ- ಬಾನು ಮುಷ್ತಾಕ್
ಅಂಬೇಡ್ಕರ್ ಭವನದಲ್ಲಿ, ರಾಜ್ಯ ದಲಿತ ಸಂಘರ್ಷ ಸಮಿತಿ, ಎಂ.ಬಿ.ಶ್ರೀನಿವಾಸ್ ಪ್ರತಿಷ್ಠಾಪನದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

Banu Mushtaq: ಬೂಕರ್ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್ ಅವರು ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಧರಿಸಿಕೊಂಡು ಪುಷ್ಪ ನಮನ ಸಲ್ಲಿಸಿದ್ದು ಮಾಧ್ಯಮಗಳಲ್ಲಿ ಸುದ್ದಿಯಾದ ನಂತರ ವಿವಾದಕ್ಕೆ ಕಾರಣವಾಗಿದೆ.
ಮಂಡ್ಯದ ಅಂಬೇಡ್ಕರ್ ಭವನದಲ್ಲಿ, ರಾಜ್ಯ ದಲಿತ ಸಂಘರ್ಷ ಸಮಿತಿ, ಎಂ.ಬಿ.ಶ್ರೀನಿವಾಸ್ ಪ್ರತಿಷ್ಠಾಪನದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಈ ವೇಳೆ ಅವರು ಚಪ್ಪಲಿ ಧರಿಸಿಕೊಂಡು ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ್ದಾರೆ. ಭಾನು ಅವರು ಚಪ್ಪಲಿ ಹಾಕಿರುವುದನ್ನು ಗಮನಿಸಿದ ಕಾರ್ಯಕ್ರಮ ಸಂಘಟಕರು, ಚಪ್ಪಲಿಯನ್ನ ತೆಗೆದು ಪುಷ್ಪನಮನ ಮಾಡುವಂತೆ ಹೇಳಿದರು.
ಆದರೆ ಬಾನುಮುಷ್ತಾಕ್ ಅದಕ್ಕೆ ಒಪ್ಪದೆ ಹಾಗೆಯೇ ಪುಷ್ಪನಮನ ಸಲ್ಲಿಸಿದ್ದಾರೆ ಎಂದು ವರದಿಯಾಗಿತ್ತು. ಅಲ್ಲದೆ ಚಪ್ಪಲಿ ಹೊಲಿಯುವುದು ನಮ್ಮ ವೃತ್ತಿ. ಅದು ನಮ್ಮ ಮನೆ ದೇವರು. ನಮ್ಮ ಅಸ್ಮಿತೆಯ ಸಂಕೇತ, ನಾವು ಚಪ್ಪಲಿ ಹೊಲಿಯುವವರು. ನಮಗೆ ಅದರ ಬಗ್ಗೆ ಅಪಾರ ಗೌರವ ಇದೆ. ನಾನು ಚಪ್ಪಲಿ ಬಿಚ್ಚುವುದಿಲ್ಲ ಎಂದು ಹೇಳಿದ್ದರು ಎಂದು ಸಹ ಸುದ್ದಿಯಾಗಿದೆ.
ಬಾನು ಮುಷ್ತಾಕ್ ಸ್ಪಷ್ಟನೆ
ಚಪ್ಪಲಿ ಮನೆ ದೇವರು ಎಂದು ನಾನು ಹೇಳಿಲ್ಲ, ಮಾಧ್ಯಮದ ವರದಿಗಾರರು ಕಪೋಲಕಲ್ಪಿತ ವರದಿ ಮಾಡಿದ್ದಾರೆ. ನಾವು ಹಾಗೆ ಹೇಳಿದ್ದರೆ ಪುರಾವೆಗಳನ್ನು ನೀಡಲಿ ಎಂದು ಬಾನು ಮುಷ್ತಾಕ್ ಫೇಸ್ ಬುಕ್ ನಲ್ಲಿ ಸವಾಲು ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



