Relationship'ನಲ್ಲಿರುವಂತೆ ಯುವತಿಗೆ ಕಿರುಕುಳ; ನಿರಾಕರಿಸಿದ್ದಕ್ಕೆ ಹಾಸ್ಟೆಲ್'ಗೆ ನುಗ್ಗಿ ಹಲ್ಲೆಗೆ ಯತ್ನ, ಆರೋಪಿ ಬಂಧನ; Video
ಅದೇ ಹಾಸ್ಟೆಲ್‌ನಲ್ಲಿ ತಂಗಿದ್ದ ಮನು ಶರ್ಮಾ ಎಂಬ ವ್ಯಕ್ತಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ. ಒಟ್ಟಿಗೆ ಇರಬೇಕೆಂದು ಪದೇ ಪದೇ ಒತ್ತಾಯಿಸುತ್ತಿದ್ದ. ನಿರಾಕರಿಸಿದರೂ, ಆರೋಪಿ ಕಿರುಕುಳ ನೀಡುತ್ತಲೇ ಇದ್ದ. ನನ್ನ ಸ್ನೇಹಿತೆ ಪ್ರಿಯಾಂಕಾ ಪ್ರಸಾದ್ ಮೂಲಕ ನನ್ನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ.

ಬೆಂಗಳೂರು: ‘ರಿಲೇಶನ್‌ಶಿಪ್’ ಒತ್ತಾಯವನ್ನು ನಿರಾಕರಿಸಿದ ಹಿನ್ನೆಲೆಯಲ್ಲಿ ಯುವತಿಗೆ ವ್ಯಕ್ತಿಯೊಬ್ಬ ಕಿರುಕುಳ, ದೌರ್ಜನ್ಯ ಹಾಗೂ ಹಲ್ಲೆಗೆ ಯತ್ನಿಸಿರುವ ಘಟನೆಯೊಂದು ಇಂದಿರಾನಗರ ಪ್ರದೇಶದಲ್ಲಿರುವ ಜನಪ್ರಿಯ ಹಾಸ್ಟೆಲ್‌ನಲ್ಲಿ ನಡೆದಿದೆ.
ಮಹಿಳೆ ಸಲ್ಲಿಸಿದ ದೂರಿನ ಪ್ರಕಾರ, ಅದೇ ಹಾಸ್ಟೆಲ್‌ನಲ್ಲಿ ತಂಗಿದ್ದ ಮನು ಶರ್ಮಾ ಎಂಬ ವ್ಯಕ್ತಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ. ಒಟ್ಟಿಗೆ ಇರಬೇಕೆಂದು ಪದೇ ಪದೇ ಒತ್ತಾಯಿಸುತ್ತಿದ್ದ. ನಿರಾಕರಿಸಿದರೂ, ಆರೋಪಿ ಕಿರುಕುಳ ನೀಡುತ್ತಲೇ ಇದ್ದ. ನನ್ನ ಸ್ನೇಹಿತೆ ಪ್ರಿಯಾಂಕಾ ಪ್ರಸಾದ್ ಮೂಲಕ ನನ್ನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ.
ಮಾರ್ಚ್ 11ರ ರಾತ್ರಿ ಹಾಸ್ಟೆಲ್ ಆವರಣದಲ್ಲಿ ಕೂಗಾಡಲು ಪ್ರಾರಂಭಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ಹೋಯಿತು ಎಂದು ತಿಳಿಸಲಾಗಿದೆ.
ನನ್ನ ಮತ್ತು ನನ್ನ ಸ್ನೇಹಿತನ ವಿರುದ್ಧ ಮನು ಶರ್ಮಾ ಅಸಭ್ಯ ಮತ್ತು ಅವಹೇಳನಕಾರಿ ಭಾಷೆಯನ್ನು ಬಳಸಿದ್ದಾನೆ. ಅಲ್ಲದೆ, ಹಾಸ್ಟೆಲ್‌ನಲ್ಲಿ ತಂಗಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅವರನ್ನು ನಿಂದಿಸಿದ್ದಾನೆ ಮತ್ತು ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಿದ್ದಾರೆ.
ವಾಗ್ವಾದದ ಸಮಯದಲ್ಲಿ ಆರೋಪಿ ನನ್ನ ಮತ್ತು ನನ್ನ ಸ್ನೇಹಿತನ ಮೇಲೆ ದೈಹಿಕವಾಗಿ ಹಲ್ಲೆಗೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಮನು ಶರ್ಮಾ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧನಕ್ಕೊಳಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



