ಕರ್ತವ್ಯಲೋಪ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಪೊಲೀಸರ ಮೇಲಿನ ನಿಯಂತ್ರಣಕ್ಕೆ PEBಗೆ ಮತ್ತಷ್ಟು ಶಕ್ತಿ; ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ
ಈ ವರೆಗೂ ಡಿಎಸ್ಪಿ ಹುದ್ದೆಯವರೆಗೆ ಇರುವ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸರ್ಕಾರದ ಅನುಮತಿ ಮತ್ತು ಇಲಾಖಾ ವಿಚಾರಣೆ ಅಗತ್ಯವಿತ್ತು. ಆದರೆ, ತಿದ್ದುಪಡಿ ಮಸೂದೆಯಿಂದಾಗಿ ದೋಷ, ನಿರ್ಲಕ್ಷ್ಯ ಅಥವಾ ಕರ್ತವ್ಯಲೋಪ ಕಂಡುಬಂದಲ್ಲಿ, ಇವರ ವಿರುದ್ಧ ಪಿಇಬಿ ತಕ್ಷಣ ಕ್ರಮ ಕೈಗೊಳ್ಳಬಹುದಾಗಿದೆ.

ಬೆಂಗಳೂರು: ತಪ್ಪು ಮಾಡಿದ ಪೊಲೀಸ್ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ.
ಪೊಲೀಸ್ ಇಲಾಖೆಯಲ್ಲಿ ಶಿಸ್ತು ಮತ್ತು ಪಾರದರ್ಶಕತೆ ತರುವ ಉದ್ದೇಶದ 'ಕರ್ನಾಟಕ ಪೊಲೀಸ್ (ತಿದ್ದುಪಡಿ) ವಿಧೇಯಕ'ವನ್ನು ವಿಧಾನಸಭೆಯು ಅಂಗೀಕರಿಸಿದೆ. ಈ ಮೂಲಕ ಪೊಲೀಸರ ಮೇಲಿನ ನಿಯಂತ್ರಣಕ್ಕೆ ಪೊಲೀಸ್ ಎಸ್ಟಾಬ್ಲಿಶ್‌ಮೆಂಟ್ ಬೋರ್ಡ್ (PEB)ಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ.
ಈ ವರೆಗೂ ಡಿಎಸ್ಪಿ ಹುದ್ದೆಯವರೆಗೆ ಇರುವ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸರ್ಕಾರದ ಅನುಮತಿ ಮತ್ತು ಇಲಾಖಾ ವಿಚಾರಣೆ ಅಗತ್ಯವಿತ್ತು. ಆದರೆ, ತಿದ್ದುಪಡಿ ಮಸೂದೆಯಿಂದಾಗಿ ದೋಷ, ನಿರ್ಲಕ್ಷ್ಯ ಅಥವಾ ಕರ್ತವ್ಯಲೋಪ ಕಂಡುಬಂದಲ್ಲಿ, ಇವರ ವಿರುದ್ಧ ಪಿಇಬಿ ತಕ್ಷಣ ಕ್ರಮ ಕೈಗೊಳ್ಳಬಹುದಾಗಿದೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಾತನಾಡಿ, ಪೊಲೀಸರಲ್ಲಿನ ನಿರಂತರ ಅನಿಯಮಿತತೆಗಳು ಹಾಗೂ ಲೋಕಾಯುಕ್ತ ಬಲೆಗೆ ಸಿಲುಕುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ತಿದ್ದುಪಡಿ ಅಗತ್ಯವಾಗಿತ್ತು ಎಂದು ಹೇಳಿದ್ದಾರೆ.
ಹೊಸ ನಿಯಮದಂತೆ, ದುರಾಚರಣೆ, ಗಂಭೀರ ನಿರ್ಲಕ್ಷ್ಯ, ಕರ್ತವ್ಯಲೋಪ ಅಥವಾ ನೈತಿಕ ತಪ್ಪು ಮಾಡಿದ ಅಧಿಕಾರಿಗಳನ್ನು PEB ನೇರವಾಗಿ ಶಿಕ್ಷಿಸಲು ಸಾಧ್ಯವಾಗುತ್ತದೆ. ಇದರಿಂದ ಕ್ರಮ ಪ್ರಕ್ರಿಯೆ ವೇಗವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚಿನ್ನಮಾರಯ್ಯ ನೇತೃತ್ವದ ಸಮಿತಿಯು ಮಾರ್ಚ್ 11, 2026 ರಂದು ಪೊಲೀಸ್ ಉಪ ವರಿಷ್ಠಾಧಿಕಾರಿಗಳಿಗೆ ಬಡ್ತಿ ನೀಡುವ ಕುರಿತು ವರದಿಯನ್ನು ಸಲ್ಲಿಸಿದ್ದು, ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸುವಲ್ಲಿನ ತೊಂದರೆಗಳಿಂದಾಗಿ ಈ ಬಡ್ತಿಗಳು ವಿಳಂಬವಾಗಿವೆ. ಸರ್ಕಾರ ಶೀಘ್ರದಲ್ಲೇ ಈ ಬಗ್ಗೆ ನಿರ್ಧರಿಸಲಿದೆ ಎಂದು ಹೇಳಿದರು.
ತರೀಕೆರೆ ಕಾಂಗ್ರೆಸ್ ಶಾಸಕ ಜಿ.ಎಚ್. ಶ್ರೀನಿವಾಸ್ ಅವರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್ ಅವರು, ಕೇಡರ್ ಮತ್ತು ನೇಮಕಾತಿ ನಿಯಮಗಳ ಅಡಿಯಲ್ಲಿ, ನೇರ ನೇಮಕಾತಿ ಮತ್ತು ಬಡ್ತಿಗಳ ನಡುವೆ 20:80 ಅನುಪಾತದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



