ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಹಸ್ತಕ್ಷೇಪ: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ತರಾಟೆ
ಬೆಸ್ಕಾಂ ಎಇ ಎಸ್. ಚೇತನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಮತ್ತು ಟಿ.ಎಂ. ನದಾಫ್ ಅವರಿದ್ದ ಹೈಕೋರ್ಟ್ ಪೀಠ, ವರ್ಗಾವಣೆ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿಗಳ ನೇರ ಹಸ್ತಕ್ಷೇಪದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸ್ತಕ್ಷೇಪ ಮಾಡುತ್ತಿರುವುದನ್ನು ಹೈಕೋರ್ಟ್ ಗಂಭೀರವಾಗಿ ಪ್ರಶ್ನಿಸಿದೆ.
ಬೆಸ್ಕಾಂ ಎಇ ಎಸ್. ಚೇತನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಮತ್ತು ಟಿ.ಎಂ. ನದಾಫ್ ಅವರಿದ್ದ ಹೈಕೋರ್ಟ್ ಪೀಠ, ವರ್ಗಾವಣೆ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿಗಳ ನೇರ ಹಸ್ತಕ್ಷೇಪದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
ಸರ್ಕಾರಿ ನೌಕರರ ವರ್ಗಾವಣೆ ವಿಚಾರವನ್ನು ಸಂಬಂಧಿಸಿದ ಇಲಾಖೆಗಳೇ ನಿರ್ವಹಿಸಬೇಕು. ಮುಖ್ಯಮಂತ್ರಿಗಳ ಕಚೇರಿ ಇಂತಹ ಮನವಿಗಳನ್ನು ಸ್ವೀಕರಿಸುವುದು ಸರಿಯಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಮಾಡಲು ಮುಖ್ಯಮಂತ್ರಿಗಳಿಗೆ ಇನ್ನಷ್ಟು ಮಹತ್ವದ ಕೆಲಸಗಳಿದ್ದು, ಇಂತಹ ವಿಷಯಗಳಿಗೆ ಸಮಯ ವ್ಯಯಿಸಬಾರದು ಎಂದು ಸೂಚಿಸಿದೆ. ಈ ಸಂಬಂಧ ಹೈಕೋರ್ಟ್ ತನ್ನ ಆದೇಶದ ಪ್ರತಿಯನ್ನು ಮುಖ್ಯಮಂತ್ರಿಗಳಿಗೆ ಕಳುಹಿಸಲು ಸೂಚನೆ ನೀಡಿದೆ.
ಪ್ರಕರಣ ಸಂಬಂಧ ಸಿಎಂ ನೀಡುವ ವರ್ಗಾವಣೆ ಶಿಫಾರಸುಗಳ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಯಿಂದಲೂ ನಿಲುವು ಕೇಳಲಾಗಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ಕಾರ್ಯದರ್ಶಿ, ಸಿಎಂ ಕಚೇರಿಯಿಂದ ನೀಡುವ ಟಿಪ್ಪಣಿಗಳು ಕೇವಲ ಶಿಫಾರಸುಗಳಾಗಿದ್ದು, ಅಂತಿಮ ಆದೇಶವನ್ನು ಸಂಬಂಧಪಟ್ಟ ಇಲಾಖೆ ನೀಡುತ್ತದೆ ಎಂದು ಸ್ಪಷ್ಟಪಡಿಸಿದ್ದರು.
ಮತ್ತೊಂದೆಡೆ, ಇಂಧನ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿಯೂ ಸಿಎಂ ಕಚೇರಿ ಪಾತ್ರ ವಹಿಸಿದ್ದ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆದಿವೆ.
ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಇಲಾಖೆಗಳ ಕಾರ್ಯಚಟುವಟಿಕೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ಆರೋಪಗಳೂ ಕೇಳಿಬಂದಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಹೈಕೋರ್ಟ್ ನೀಡಿದ ಈ ತೀಕ್ಷ್ಣ ಸೂಚನೆ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



