ರಾಜ್ಯ

ಕೋತಿಗಳ ಕಿತಾಪತಿಗೆ ಜೀವ ಬಲಿ: ಗೂಡು ಕದಡಿ ಕಪಿಚೇಷ್ಠೆ; ಹೆಜ್ಜೇನು ದಾಳಿಯಿಂದ ವ್ಯಕ್ತಿ ಸಾವು, ನಾಲ್ವರು ಅಸ್ವಸ್ಥ

ಕಾರು ಶೋರೂಂ ಮೇಲ್ವಿಚಾರಕರಾಗಿದ್ದ ವಿಜಯ್ ಪ್ರಕಾಶ್ (65) ಮೃತ ದುರ್ದೈವಿ. ಮಾರುತಿ ನಗರದ ಪಿಎನ್ ಟಿ ಕ್ವಾಟ್ರಸ್ ಬಳಿ ಮರದಲ್ಲಿದ್ದ ಹೆಜ್ಜೇನು ಅಲ್ಲಿದ್ದ ಹಲವರ ಮೇಲೆ ದಾಳಿ ನಡೆಸಿದೆ.

ಕೋತಿಗಳ ಕಿತಾಪತಿಗೆ ಜೀವ ಬಲಿ: ಗೂಡು ಕದಡಿ ಕಪಿಚೇಷ್ಠೆ; ಹೆಜ್ಜೇನು ದಾಳಿಯಿಂದ ವ್ಯಕ್ತಿ ಸಾವು, ನಾಲ್ವರು ಅಸ್ವಸ್ಥ
ಸಂಗ್ರಹ ಚಿತ್ರ
Published On :

ತುಮಕೂರು: ಕೋತಿಯೊಂದು ಮಾಡಿದ ಕಿತಾಪತಿಗೆ ಜನರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ಓರ್ವ ಮೃತಪಟ್ಟು ನಾಲ್ವರು ಅಸ್ವಸ್ಥರಾಗಿರುವ ಘಟನೆ ತುಮಕೂರಿನ ಮಾರುತಿ ನಗರದಲ್ಲಿ ನಡೆದಿದೆ.

ಕಾರು ಶೋರೂಂ ಮೇಲ್ವಿಚಾರಕರಾಗಿದ್ದ ವಿಜಯ್ ಪ್ರಕಾಶ್ (64) ಮೃತ ದುರ್ದೈವಿ. ಮಾರುತಿ ನಗರದ ಪಿಎನ್ ಟಿ ಕ್ವಾಟ್ರಸ್ ಬಳಿ ಮರದಲ್ಲಿದ್ದ ಹೆಜ್ಜೇನು ಅಲ್ಲಿದ್ದ ಹಲವರ ಮೇಲೆ ದಾಳಿ ನಡೆಸಿದೆ.

ಈ ವೇಳೆ ಕೆಲಸ ಮುಗಿಸಿ ಬೈಕ್‌ನಲ್ಲಿ ಬರುತ್ತಿದ್ದ ವಿಜಯ್ ಪ್ರಕಾಶ್ ಅವರ ಮೇಲೂ ದಾಳಿ ನಡೆಸಿವೆ. ಈ ವೇಳೆ ಶರ್ಟ್ ಬಿಚ್ಚಿ ಅವನ್ನು ಓಡಿಸಲು ಪ್ರಕಾಶ್ ಅವರು ಪ್ರಯತ್ನ ಮಾಡಿದ್ದಾರೆ. ಆದರೆ, ಐವತ್ತಕ್ಕೂ ಅಧಿಕ ಜೇನು ನೊಣಗಳು ಅವರ ಮುಖ ಸೇರದಂತೆ ದೇಹದ ಹಲವು ಭಾಗಗಳ ಮೇಲೆ ದಾಳಿ ನಡೆಸಿವೆ. ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರು ಕೊನೆಯುಸಿರೆಳೆದಿದ್ದಾರೆ.

ಘಟನೆಯಲ್ಲಿ ಇತರ ನಾಲ್ಕೈದು ಜನರಿಗೂ ಗಾಯಗಳಾಗಿವೆ. ಯುಗಾದಿ ಹಬ್ಬದ ದಿನವೇ ದುರ್ಘಟನೆ ಸಂಭವಿಸಿದ್ದು, ಮೃತರ ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ. ಈ ನಡುವೆ ಈ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋತಿ ಕಾಟವನ್ನು ನಿಯಂತ್ರಿಸಲು ಸಂಬಂಧಿತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.