ಯಾವುದೇ ಧರ್ಮವೂ ದ್ವೇಷ ಬೋಧಿಸುವುದಿಲ್ಲ. ಪ್ರೀತಿಯನ್ನು ಬೋಧಿಸುತ್ತವೆ: ಸಿಎಂ ಸಿದ್ದರಾಮಯ್ಯ
ಮಾನವಕುಲದ ಒಳಿತಿಗಾಗಿ ಸರ್ವರೂ ಪ್ರಾರ್ಥಿಸುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ - ವಿಶ್ವಾಸದಿಂದ ಬಾಳುವುದು ಮುಖ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು.

ಬೆಂಗಳೂರು: ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ. ಇದನ್ನು ಅರಿತು ಬಾಳಿದರೆ ಸಮಾಜದಲ್ಲಿ ಶಾಂತಿ-ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಬೆಂಗಳೂರಿನ ಮಿಲ್ಲರ್ಸ್ ರಸ್ತೆಯ ಮಸ್ಜಿದ್-ಈ-ಖಾದ್ರಿಯಾದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು, ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಗಳನ್ನು ತಿಳಿಸಿದರು.
ಬಳಿಕ ಮತನಾಡಿದ ಅವರು, ಮಾನವಕುಲದ ಒಳಿತಿಗಾಗಿ ಸರ್ವರೂ ಪ್ರಾರ್ಥಿಸುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ - ವಿಶ್ವಾಸದಿಂದ ಬಾಳುವುದು ಮುಖ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ ಏಕತೆಯಿರುವ ನಮ್ಮ ದೇಶದಲ್ಲಿ ಎಲ್ಲರೂ ಒಟ್ಟಾಗಿ ಬಾಳಬೇಕು.
ಯಾವುದೇ ಧರ್ಮವೂ ದ್ವೇಷವನ್ನು ಬೋಧಿಸುವುದಿಲ್ಲ. ಎಲ್ಲ ಧರ್ಮಗಳೂ ಪ್ರೀತಿಯನ್ನು ಬೋಧಿಸುತ್ತವೆ. ಇದನ್ನು ಅರಿತು ಬಾಳಿದರೆ ಸಮಾಜದಲ್ಲಿ ಶಾಂತಿ - ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


