ರಾಜ್ಯ

ತುಮಕೂರು: ವಿಡಿಯೊ ಮಾಡಿಟ್ಟು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕಚೇರಿಯಲ್ಲೇ ನೇಣಿಗೆ ಶರಣು

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ (59b) ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ.

ತುಮಕೂರು: ವಿಡಿಯೊ ಮಾಡಿಟ್ಟು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕಚೇರಿಯಲ್ಲೇ ನೇಣಿಗೆ ಶರಣು
Published On :

ತುಮಕೂರು: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಲ್ಲಿಕಾರ್ಜುನ (59b) ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಸಾವಿಗೆ ಮುಂಚೆ ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕಾರಣವೆಂದು ಹೇಳಿ ಮಾಡಿರುವ ವಿಡಿಯೊ ವೈರಲ್ ಆಗಿದೆ.

ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ಸಾವು

ಮಲ್ಲಿಕಾರ್ಜುನ ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಾರಣ ಎಂದು ಆರೋಪಿಸಿದ್ದಾರೆ. ನನ್ನ ತಾಯಿ, ಪತ್ನಿ ಮತ್ತು ಮಕ್ಕಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಆದರೆ ಮೇಲಾಧಿಕಾರಿ ನೀಡಿದ ಕಿರುಕುಳದಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಕೃಷ್ಣಪ್ಪ ಅವರಿಗೆ ದೇವರು ಹಾಗೂ ಕಾನೂನು ಶಿಕ್ಷೆ ನೀಡಲಿದೆ ಎಂದೂ ಹೇಳಿದ್ದಾರೆ.

ಡೆತ್ ನೋಟ್ ವಶಕ್ಕೆ ಪಡೆದಿರುವ ಪೊಲೀಸರು

ಮಲ್ಲಿಕಾರ್ಜುನ ಮೂಲತಃ ಪಾವಗಡ ತಾಲೂಕಿನವರಾಗಿದ್ದು, ಕಳೆದ ಮೂರು ವರ್ಷಗಳಿಂದ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನೂ ಕೆಲವೇ ದಿನಗಳಲ್ಲಿ ಅವರ ಸೇವಾ ಅವಧಿ ಮುಕ್ತಾಯಗೊಳ್ಳಬೇಕಿತ್ತು. ಆದರೆ ಜಂಟಿ ನಿರ್ದೇಶಕ ನೀಡಿದ ಕಿರುಕುಳದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ದಿನ ಸಂಜೆ, ಕಚೇರಿಯ ಎಲ್ಲಾ ಸಿಬ್ಬಂದಿ ತೆರಳಿದ ನಂತರ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ.

ಡೆತ್ ನೋಟ್ ವಶಪಡಿಸಿಕೊಂಡಿರುವ ಪಾವಗಡ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.