ರಾಜ್ಯ

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ತಾಯಿ ಕಣ್ಣೆದುರೇ 4 ವರ್ಷದ ಬಾಲಕಿ ದಾರುಣ ಸಾವು..!

ನಿಶಿಕಾ ತಾಯಿಯ ಕೈ ಹಿಡಿದು ನಡೆದುಕೊಂಡು ಹೋಗುತ್ತಿದ್ದಳು, ಮತ್ತೊಂದು ಮಗುವನ್ನು ಲಾವಣ್ಯ ತೋಳುಗಳಲ್ಲಿ ಹೊತ್ತುಕೊಂಡು ರಸ್ತೆಯಲ್ಲಿ ನಡೆದು ಸಾಗುತ್ತಿದ್ದರು. ಈ ವೇಳೆ ಅತಿವೇಗದಲ್ಲಿ ಬಂದ ಸರಕು ವಾಹನ ಏಕಾಏಕಿ ಬಾಲಕಿಗೆ ಡಿಕ್ಕಿ ಹೊಡೆದಿದೆ.

ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ತಾಯಿ ಕಣ್ಣೆದುರೇ 4 ವರ್ಷದ ಬಾಲಕಿ ದಾರುಣ ಸಾವು..!
ಸಂಗ್ರಹ ಚಿತ್ರ
Published On :

ಬೆಂಗಳೂರು: ರಸ್ತೆ ಅಪಘಾತದಲ್ಲಿ 4 ವರ್ಷದ ಬಾಲಕಿ ತಾಯಿಯ ಕಣ್ಣೆದುರೇ ಮೃತಪಟ್ಟ ಹೃದಯ ವಿದ್ರಾವಕ ಘಟನೆಯೊಂದು ಬೆಂಗಳೂರು ಹೊರವಲಯದ ಮಾದನಾಯಕನಹಳ್ಳಿ ಪ್ರದೇಶದ ಹನುಮಂತಗೌಡನಪಾಳ್ಯದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ದಾಸನಪುರ ನಿವಾಸಿಗಳಾದ ರಾಜೇಂದ್ರ (35) ಮತ್ತು ಲಾವಣ್ಯ (30) ಅವರ ಪುತ್ರಿ ನಿಶಿಕಾ (4) ಮೃತಪಟ್ಟ ಬಾಲಕಿಯಾಗಿದ್ದಾಳೆ.

ಲಾವಣ್ಯ ಅವರು ತಮ್ಮ ಇಬ್ಬರು ಮಕ್ಕಳೊಂದಿಗೆ ಆದಕಮಾರನಹಳ್ಳಿಯ ಶ್ರೀ ಆಂಜನೇಯ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ನಿಶಿಕಾ ತಾಯಿಯ ಕೈ ಹಿಡಿದು ನಡೆದುಕೊಂಡು ಹೋಗುತ್ತಿದ್ದಳು, ಮತ್ತೊಂದು ಮಗುವನ್ನು ಲಾವಣ್ಯ ತೋಳುಗಳಲ್ಲಿ ಹೊತ್ತುಕೊಂಡು ರಸ್ತೆಯಲ್ಲಿ ನಡೆದು ಸಾಗುತ್ತಿದ್ದರು. ಈ ವೇಳೆ ಅತಿವೇಗದಲ್ಲಿ ಬಂದ ಸರಕು ವಾಹನ ಏಕಾಏಕಿ ಬಾಲಕಿಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ನಿಶಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ನಾನು ನನ್ನ ಮಗಳ ಕೈ ಹಿಡಿದೇ ನಡೆದುಕೊಂಡು ಹೋಗುತ್ತಿದ್ದೆ. ನನ್ನ ಕಣ್ಣೆದುರೇ ಅವಳು ಮೃತಪಟ್ಟಳು ಎಂದು ತಾಯಿ ಲಾವಣ್ಯ ಅವರು ಕಣ್ಣೀರಿಟ್ಟಿದ್ದಾರೆ.

ನಿಶಿಕಾ ಅಂಗನವಾಡಿಗೆ ಹೋಗುತ್ತಿದ್ದು, ಕುಟುಂಬದ ಹಿರಿಯ ಮಗಳಾಗಿದ್ದಳು. ಘಟನೆ ಬಳಿಕ ಸ್ಥಳೀಯರು ಆಕ್ರೋಶಗೊಂಡು ಲಾರಿಯ ಗಾಜು ಒಡೆದು ಚಾಲಕನ ಮೇಲೆ ಹಲ್ಲೆ ನಡೆಸಿದರು.

ಮದನಾಯಕನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾಲಕನನ್ನು ವಶಕ್ಕೆ ಪಡೆದು, MH-04-HY-2203 ಸಂಖ್ಯೆಯ ಸರಕು ವಾಹನವನ್ನು ಜಪ್ತಿ ಮಾಡಿದ್ದಾರೆ. ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.