ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು; Video
ಕೇರಳ ಮೂಲದ ಪಿ ಕೆ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು.

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Bengaluru-Mysuru Expressway) ಇಂದು ಸೋಮವಾರ ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್ ಡಿಕ್ಕಿಯಾಗಿ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಕೇರಳ ಮೂಲದ ಪಿ ಕೆ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗ್ರಾಮದ ಪುಟ್ಟಪ್ಪನದೊಡ್ಡಿ ಬಳಿ ಬಸ್ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ ತಕ್ಷಣ ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪೈಕಿ ಇಬ್ಬರು ಬೆಂಗಳೂರಿನವರಾಗಿದ್ದಾರೆ. ಮೃತರನ್ನು ಕೇರಳದ ಕಾಜಿಕೋಟೆಯ ಮೊಹಮ್ಮದ್ ಫರಾನ್(22ವ), ಸುಲ್ಫಿ (45ವ), ಬೆಂಗಳೂರಿನ ಕಲಾಸಿಪಾಳ್ಯದ ನಿವಾಸಿ ರಶೀದ್(45ವ) ಹಾಗೂ ಆಡುಗೋಡಿಯ ಅಣ್ಣೆಪಾಳ್ಯ ನಿವಾಸಿ ಸಾಕೇರ್ ಎಂದು ಗುರುತಿಸಲಾಗಿದೆ.
ಕೇರಳದ ಕಣ್ಣೂರಿನ ಅಬ್ದುಲ್, ಅಲೇನ್ ಎಂಬುವರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಪ್ರಕರಣ ದಾಖಲಾಗಿದೆ. ಬಸ್‌ನಲ್ಲಿ ಎಷ್ಟು ಜನರು ಪ್ರಯಾಣಿಸುತ್ತಿದ್ದರು ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



