ರಾಜ್ಯ

ಹಂತ ಹಂತವಾಗಿ ಬೇಡಿಕೆ ಈಡೇರಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಭರವಸೆ: ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು!

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು.

ಹಂತ ಹಂತವಾಗಿ ಬೇಡಿಕೆ ಈಡೇರಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಭರವಸೆ: ಪ್ರತಿಭಟನೆ ಹಿಂಪಡೆದ ಅಂಗನವಾಡಿ ನೌಕರರು!
ಅಂಗನವಾಡಿ ಸಂಘದ ಪದಾಧಿಕಾರಿಗಳೊಂದಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Published On :

ಬೆಂಗಳೂರು: ಹಂತ-ಹಂತವಾಗಿ ಬೇಡಿಕೆ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ನಡೆಸುತ್ತಿದ್ದ ಪ್ರತಿಭಟನೆಯನ್ನು ವಾಪಸ್‌ ಪಡೆದಿದ್ದಾರೆ.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಅಂಗನವಾಡಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನ ಹೆಚ್ಚಳ, ಎಲ್‌ಕೆಜಿ, ಯುಕೆಜಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಬಗ್ಗೆ ಸಚಿವರು ಪದಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚೆ ನಡೆಸಿದರು.

ಅಂಗನವಾಡಿ ಕೇಂದ್ರಗಳು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಬಗ್ಗೆ ಸರ್ಕಾರ ಸಾಕಷ್ಟು ಕಾಳಜಿ ವಹಿಸಿದೆ. ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು. ನಾನು ಎಲ್ಲರ ಹಿತರಕ್ಷಣೆಗೆ ಬದ್ಧಳಾಗಿದ್ದೇನೆ ಎಂದು ಸಚಿವರು ತಿಳಿಸಿದರು.

ಈ ವೇಳೆ‌ ಸಂಘದ ಅಧ್ಯಕ್ಷರಾದ ವರಲಕ್ಷ್ಮೀ, ಕಾರ್ಯಾಧ್ಯಕ್ಷರಾದ ಶಾಂತಾ ಎಚ್.ಘಂಟಿ, ಪ್ರಧಾನ ಕಾರ್ಯದರ್ಶಿ ಎಚ್. ಎಸ್.ಸುನಂದಾ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.