ರಾಜ್ಯ

ಬೆಂಗಳೂರು: ಬಿಯರ್ ಕುಡಿಯುತ್ತಾ ಬೈಕ್ ಚಾಲನೆ; ಮಹಿಳೆ ಸೇರಿ ಮೂವರು ವೈದ್ಯರ ಬಂಧನ, Video!

ಬಿಯರ್ ಕುಡಿಯುತ್ತಾ ನಗರದ ಬೀದಿಗಳಲ್ಲಿ 'ಅಜಾಗರೂಕತೆಯಿಂದ' ಬೈಕ್ ಚಾಲನೆ ಮಾಡುತ್ತಿರುವ ವೀಡಿಯೊ ವೈರಲ್ ಬೆನ್ನಲ್ಲೇ ಯುವತಿ ಸೇರಿದಂತೆ ಮೂವರು ವೈದ್ಯರನ್ನು ಬಂಧಿಸಲಾಗಿದೆ. ಬಿಟಿಎಂ ಲೇಔಟ್‌ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿತ್ತು.

ಬೆಂಗಳೂರು: ಬಿಯರ್ ಕುಡಿಯುತ್ತಾ ಬೈಕ್ ಚಾಲನೆ; ಮಹಿಳೆ ಸೇರಿ ಮೂವರು ವೈದ್ಯರ ಬಂಧನ, Video!
ಪ್ರತ್ಯಕ್ಷ ದೃಶ್ಯ
Published On :

ಬೆಂಗಳೂರು: ಬಿಯರ್ ಕುಡಿಯುತ್ತಾ ನಗರದ ಬೀದಿಗಳಲ್ಲಿ 'ಅಜಾಗರೂಕತೆಯಿಂದ' ಬೈಕ್ ಚಾಲನೆ ಮಾಡುತ್ತಿರುವ ವೀಡಿಯೊ ವೈರಲ್ ಬೆನ್ನಲ್ಲೇ ಯುವತಿ ಸೇರಿದಂತೆ ಮೂವರು ವೈದ್ಯರನ್ನು ಬಂಧಿಸಲಾಗಿದೆ. ಬಿಟಿಎಂ ಲೇಔಟ್‌ನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆಸಿದ್ದು ಇದರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ವೈರಲ್ ವಿಡಿಯೋವನ್ನು ಗಮನಿಸಿದ ಪೊಲೀಸರು, ಬೇಜವಾಬ್ದಾರಿ ಚಾಲನೆ ಮತ್ತು ಸಂಚಾರ ನಿಯಮಗಳ ಉಲ್ಲಂಘನೆ ಎಂದು ಆರೋಪಿಸಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಡಿಯೋ ಕ್ಲಿಪ್‌ನಲ್ಲಿ ಬೈಕ್ ನಲ್ಲಿ ಮೂವರು ಸವಾರಿ ಮಾಡುತ್ತಿದ್ದು ಹಿಂಬದಿ ಸವಾರರಲ್ಲಿ ಒಬ್ಬ ಬಿಯರ್ ಕುಡಿಯುತ್ತಿರುವುದನ್ನು ಕಾಣಬಹುದು. ಮೂವರು ತಡರಾತ್ರಿ ಜನನಿಬಿಡ ರಸ್ತೆಯಲ್ಲಿ ವೇಗವಾಗಿ ಚಾಲನೆ ಮಾಡುತ್ತಾ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದರು.

ಸುತ್ತಮುತ್ತಲಿನ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಿದ ನಂತರ, ನಮ್ಮ ತಂಡವು ಬೈಕ್ ಮತ್ತು ಸವಾರರನ್ನು ಗುರುತಿಸಲು ವೀಡಿಯೊವನ್ನು ಸೂಕ್ಷ್ಮವಾಗಿ ಪರಿಶೀಲಿಸಿತು. ವಾಹನದ ನೋಂದಣಿ ಸಂಖ್ಯೆಯ ಸಹಾಯದಿಂದ, ನಾವು ದ್ವಿಚಕ್ರ ವಾಹನ ಮಾಲೀಕರನ್ನು ಪತ್ತೆಹಚ್ಚಿದ್ದೇವೆ. ವೀಡಿಯೊದಲ್ಲಿ ಕಂಡುಬರುವ ಮೂವರು ವೈದ್ಯರಾಗಿದ್ದು ಈ ಪೈಕಿ ಒಬ್ಬರು ಮಹಿಳೆಯಾಗಿದ್ದಾರೆ. ಇವರೆಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಉದ್ಯೋಗಿಗಳಾಗಿದ್ದಾರೆ. ಸದ್ಯ ಅವರನ್ನೆಲ್ಲಾ ಬಂಧಿಸಲಾಯಿತು. ನಂತರ ಅವರನ್ನು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.