ರಾಜ್ಯ

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ: ವದಂತಿಗಳಿಗೆ ಕಿವಿಗೊಡಬೇಡಿ; ಜನರಿಗೆ ರಾಜ್ಯ ಸರ್ಕಾರ ಮನವಿ!

ದೇಶಾದ್ಯಂತ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಸಾಕಷ್ಟು ಇಂಧನ ಸಂಗ್ರಹವಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ ಎಂದು ರಾಜ್ಯ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ: ವದಂತಿಗಳಿಗೆ ಕಿವಿಗೊಡಬೇಡಿ; ಜನರಿಗೆ ರಾಜ್ಯ ಸರ್ಕಾರ ಮನವಿ!
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆಯಾಗಿದೆ ಎಂಬ ವದಂತಿಗಳು ಹರಿದಾಡುತ್ತಿದೆ. ಈ ಕುರಿತು ರಾಜ್ಯ ಸರ್ಕಾರ ಬುಧವಾರ ಸ್ಪಷ್ಪನೆ ನೀಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯ ಬಗ್ಗೆ ವದಂತಿಗಳಿಗೆ ಕಿವಿಗೊಡಬೇಡಿ ಅಥವಾ ರಾಜ್ಯದ ಕೆಲವು ಭಾಗಗಳಲ್ಲಿ ಜನರು ಪೆಟ್ರೋಲ್ ಬಂಕ್ ಗಳ ಮುಂದೆ ಕ್ಯೂನಲ್ಲಿ ನಿಂತಿದ್ದಾರೆ ಎಂಬ ವರದಿಗಳಿಂದ ಭಯಭೀತರಾಗಿ ಖರೀದಿಗೆ ಮುಂದಾಗಬೇಡಿ ಮನವಿ ಮಾಡಿದೆ.

ದೇಶಾದ್ಯಂತ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಸಾಕಷ್ಟು ಇಂಧನ ಸಂಗ್ರಹವಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ ಎಂದು ರಾಜ್ಯ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.

ರಾಜ್ಯದ ಕೆಲವು ಭಾಗಗಳಲ್ಲಿ ಜನರು ಬಾಟಲಿಗಳು ಮತ್ತು ಕ್ಯಾನ್‌ಗಳಂತಹ ಕಂಟೈನರ್‌ಗಳೊಂದಿಗೆ ಪೆಟ್ರೋಲ್ ಪಂಪ್‌ಗಳಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದಾರೆ ಎಂದು ವಿವಿಧ ಮಾಧ್ಯಮಗಳ ವರದಿಗಳು ಸರ್ಕಾರದ ಗಮನಕ್ಕೆ ಬಂದಿದೆ. ಇದು ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯನ್ನು ಸೂಚಿಸುವ ಸುಳ್ಳು ವದಂತಿಗಳಾಗಿವೆ ಎಂದು ಹೇಳಿದೆ.

ಗಂಭೀರ ಸುರಕ್ಷತಾ ಅಪಾಯಗಳು ಮತ್ತು ಬೆಂಕಿಯ ಅಪಾಯಗಳನ್ನು ಉಲ್ಲೇಖಿಸಿ, ಸಡಿಲವಾದ ಅಥವಾ ಸೂಕ್ತವಲ್ಲದ ಪಾತ್ರೆಗಳಲ್ಲಿ ಪೆಟ್ರೋಲ್ ಸಾಗಿಸುವುದು ಅಥವಾ ಸಂಗ್ರಹಿಸುವುದರ ವಿರುದ್ಧ ಜನರಿಗೆ ಸಲಹೆ ನೀಡಿದೆ. ವಾಹನದ ಟ್ಯಾಂಕ್‌ಗಳಿಗೆ ಮಾತ್ರ ಇಂಧನವನ್ನು ನೇರವಾಗಿ ಪೂರೈಸಲು ಚಿಲ್ಲರೆ ಮಾರಾಟ ಮಳಿಗೆಗಳಿಗೆ ಸೂಚನೆ ನೀಡಿದೆ.

ಬಾಟಲಿಗಳು, ಕ್ಯಾನ್‌ಗಳು ಅಥವಾ ಯಾವುದೇ ಬಾಹ್ಯ ಪಾತ್ರೆಗಳಲ್ಲಿ ಇಂಧನ ವಿತರಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಜಾರಿಯಲ್ಲಿರುವ ಕಾನೂನುಗಳ ಪ್ರಕಾರ, ದೊಡ್ಡ ಪ್ರಮಾಣದಲ್ಲಿ ಅಥವಾ ಅನಧಿಕೃತ ಕಂಟೈನರ್‌ಗಳಲ್ಲಿ ಇಂಧನ ಸಂಗ್ರಹಿಸುವುದು ಕಾನೂನುಬಾಹಿರವಾಗಿದೆ ಎಂದು ಎಚ್ಚರಿಕೆ ನೀಡಿದೆ.

ಇಂಧನ ಪೂರೈಕೆ ಸಮರ್ಪಕವಾಗಿದ್ದು, ಆತಂಕಕ್ಕೆ ಯಾವುದೇ ಕಾರಣವಿಲ್ಲ ಎಂದು ಸರ್ಕಾರ ಭರವಸೆ ನೀಡಿದೆ. ಈ ಮಧ್ಯೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನಗರ ವ್ಯಾಪ್ತಿಯಲ್ಲಿ ಇಂಧನ ಕೊರತೆ ಬಗ್ಗೆ ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದು, ಸಾಕಷ್ಟು ಪೂರೈಕೆ ಇದೆ ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.