ಗದಗ: ಎಸ್‌ಸಿ-ಎಸ್‌ಟಿಗಳ ನಡುವೆ ಘರ್ಷಣೆ; 191 ಮಂದಿ ವಿರುದ್ಧ ಪ್ರಕರಣ ದಾಖಲು, 21 ಜನರ ಬಂಧನ
ವಾಲ್ಮೀಕಿ ಸಮುದಾಯಕ್ಕೆ ಸೇರಿದ ರೈತನ ಜಮೀನಿನಲ್ಲಿ ಯುವಕನೊಬ್ಬ ನೀರು ಕುಡಿದಿದ್ದಾನೆ. ನೀರು ಕುಡಿದ ವ್ಯಕ್ತಿ ಎಸ್‌ಸಿ ಸಮುದಾಯಕ್ಕೆ ಸೇರಿದವನಾಗಿದ್ದಾನೆ ಎಂಬ ಕಾರಣಕ್ಕೆ ರೈತ ಆಕ್ಷೇಪ ವ್ಯಕ್ತಪಡಿಸಿದ್ದಾನೆ ಎನ್ನಲಾಗಿದೆ.

ಗದಗ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಚಿಕ್ಕವಡ್ಡಟ್ಟಿ ಗ್ರಾಮದಲ್ಲಿ ಎರಡು ಸಮುದಾಯ(ವಾಲ್ಮೀಕಿ - ಎಸ್‌ಸಿ) ಗಳ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪೊಲೀಸರು ಬುಧವಾರ 191 ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಿಸಿದ್ದು, 21 ಜನರನ್ನು ಬಂಧಿಸಿದ್ದಾರೆ.
ಕಳೆದ ಸೋಮವಾರ ಸಂಜೆ ಬೇರೆ ಸಮುದಾಯಕ್ಕೆ ಸೇರಿದ ರೈತನ ಜಮೀನಿನಲ್ಲಿ ಯುವಕನೊಬ್ಬ ನೀರು ಕುಡಿದ ನಂತರ ಈ ಹಿಂಸಾಚಾರ ಭುಗಿಲೆದ್ದಿದೆ.
ವಾಲ್ಮೀಕಿ ಸಮುದಾಯಕ್ಕೆ ಸೇರಿದ ರೈತನ ಜಮೀನಿನಲ್ಲಿ ಯುವಕನೊಬ್ಬ ನೀರು ಕುಡಿದಿದ್ದಾನೆ. ನೀರು ಕುಡಿದ ವ್ಯಕ್ತಿ ಎಸ್‌ಸಿ ಸಮುದಾಯಕ್ಕೆ ಸೇರಿದವನಾಗಿದ್ದಾನೆ ಎಂಬ ಕಾರಣಕ್ಕೆ ರೈತ ಆಕ್ಷೇಪ ವ್ಯಕ್ತಪಡಿಸಿದ್ದಾನೆ ಎನ್ನಲಾಗಿದೆ.
ಆದಾಗ್ಯೂ, ಮುಂಡರಗಿ ಪೊಲೀಸರು ಹಿಂಸಾಚಾರಕ್ಕೆ ಜಾತಿ ವಿಚಾರವನ್ನು ನಿರಾಕರಿಸಿದ್ದು, ಸೋಮವಾರ ರಾತ್ರಿ ಶಿವರಾತ್ರಿಯ ಸಮಯದಲ್ಲಿ ಹಳೆಯ ದ್ವೇಷದ ಕಾರಣ ಸಣ್ಣಪುಟ್ಟ ಗಲಾಟೆ ನಡೆದಿತ್ತು ಎಂದು ಹೇಳಿದ್ದಾರೆ.
ಎಸ್‌ಸಿ ಸಮುದಾಯಗಳ 122 ಮತ್ತು ಎಸ್‌ಟಿ ಸಮುದಾಯದ 69 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಸೋಮವಾರ ರಾತ್ರಿಯಿಂದ ಭಾರೀ ಪೊಲೀಸ್ ಬಂದೋಬಸ್ತ್ ಇದ್ದರೂ ಬುಧವಾರವೂ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಇತ್ತು.
ಹಿಂಸಾಚಾರದಲ್ಲಿ ಒಟ್ಟಾರೆಯಾಗಿ, 32 ಗ್ರಾಮಸ್ಥರು ಗಾಯಗೊಂಡಿದ್ದು, ಅವರಲ್ಲಿ 15 ಮಂದಿ ಗಂಭೀರವಾಗಿದ್ದು, ಅವರನ್ನು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಗ್ರಾಮಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. "ನಾವು 191 ಗ್ರಾಮಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ ಮತ್ತು ಗ್ರಾಮದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಹಿಂಸಾಚಾರವನ್ನು ಮುಂದುವರಿಸದಂತೆ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ" ಎಂದು ಮುಂಡರಗಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



