ಬೆಂಗಳೂರಿನಲ್ಲಿ ಭೀಕರ ಅಪಘಾತ: ಪ್ರಯಾಣಿಕನಿಗಾಗಿ ಕಾಯುತ್ತಿದ್ದ ಕಾರಿಗೆ ಲಾರಿ ಡಿಕ್ಕಿ: ಯುವಕ ಸಜೀವ ದಹನ..! Video
ಕಲಬುರಗಿ ಮೂಲದ ಅಂಬದಾಸ್ (23) ಎಂಬ ಯುವಕ ಬೆಂಕಿಯಲ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಆಂಧ್ರ ಪ್ರದೇಶದಿಂದ ಸುಂಕದಕಟ್ಟೆ ಕಡೆಗೆ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿ, ಗೂಗಲ್ ಮ್ಯಾಪ್ ಮಾರ್ಗದರ್ಶನದಂತೆ ಕುರುಬರಹಳ್ಳಿ ಮಾರ್ಗವಾಗಿ ಸಾಗುತ್ತಿತ್ತು.

ಬೆಂಗಳೂರು: ನಿಯಂತ್ರಣ ತಪ್ಪಿ ಲಾರಿಯೊಂದು ಪ್ರಯಾಣಿಕನಿಗಾಗಿ ಕಾಯುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆಯೊಂದು ನಗರದ ಕುರುಬರಹಳ್ಳಿ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದೆ.
ಕಲಬುರಗಿ ಮೂಲದ ಅಂಬದಾಸ್ (23) ಎಂಬ ಯುವಕ ಬೆಂಕಿಯಲ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಆಂಧ್ರ ಪ್ರದೇಶದಿಂದ ಸುಂಕದಕಟ್ಟೆ ಕಡೆಗೆ ಕಬ್ಬಿಣ ತುಂಬಿಕೊಂಡು ಬರುತ್ತಿದ್ದ ಲಾರಿ, ಗೂಗಲ್ ಮ್ಯಾಪ್ ಮಾರ್ಗದರ್ಶನದಂತೆ ಕುರುಬರಹಳ್ಳಿ ಮಾರ್ಗವಾಗಿ ಸಾಗುತ್ತಿತ್ತು. ಆದರೆ, ಈ ಮಾರ್ಗದಲ್ಲಿ ಇಳಿಜಾರು ರಸ್ತೆ ಇರುವುದರಿಂದ, ಈಗಾಗಲೇ ಓವರ್‌ಲೋಡ್ ಆಗಿದ್ದ ಲಾರಿ ನಿಯಂತ್ರಣ ತಪ್ಪಿದೆ.
ಈ ವೇಳೆ ಪ್ರಯಾಣಿಕನಿಗಾಗಿ ಕಾಯುತ್ತಿದ್ದ ಕಾರೊಂದಕ್ಕೆ ಲಾರಿ ಭೀಕರವಾಗಿ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ತೀವ್ರತೆಯಿಂದ ಕಾರನ್ನು ಸುಮಾರು 50ರಿಂದ 100 ಮೀಟರ್ ದೂರವರೆಗೆ ಎಳೆದೊಯ್ದಿದೆ.
ನಂತರ ಕಾರು ಸಮೀಪದಲ್ಲಿದ್ದ ಸ್ಕ್ರಾಪ್ ಗೋದಾಮಿಗೆ ನುಗ್ಗಿದ್ದು, ಡಿಕ್ಕಿಯಿಂದ ಉಂಟಾದ ಸ್ಪಾರ್ಕ್‌ನಿಂದ ಕಾರು ಹಾಗೂ ಸ್ಕ್ರಾಪ್ ಸಾಮಗ್ರಿಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮವಾಗಿ ಕಾರು ಮತ್ತು ಲಾರಿ ಎರಡೂ ಹೊತ್ತಿ ಉರಿದಿವೆ.
ಘಟನೆಯ ಸಮಯದಲ್ಲಿ ಕಾರಿನೊಳಗಿದ್ದ ಚಾಲಕ ಬೆಂಕಿಯಲ್ಲಿ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾನೆ. ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಲು ಸಾಕಷ್ಟು ಹರಸಾಹಸ ಪಟ್ಟಿದ್ದಾರೆ. ಐದಾರು ಅಗ್ನಿಶಾಮಕ ವಾಹನಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು.
ಲಾರಿ ಚಾಲಕ ಅಪಘಾತ ಸಂಭವಿಸುತ್ತಿದ್ದಂತೆಯೇ ಲಾರಿಯಿಂದ ಜಿಗಿದು ಸಮೀಪದ ರಾಜಾಕಾಲುವೆಗೆ ಹಾರಿ ತನ್ನ ಜೀವವನ್ನು ಉಳಿಸಿಕೊಂಡಿದ್ದಾನೆ. ಆತನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣ ಸಂಬಂಧ ರಾಜಾಜಿನಗರ ಸಂಚಾರಿ ಪೊಲೀಸರು ಚಾಲಕನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



