Chopper ಪ್ರಯಾಣ ವಿವಾದ: 'ಬೊಮ್ಮಾಯಿ ಕಾಲದಲ್ಲೇ ಕೋಟಿ ಕೋಟಿ ಖರ್ಚು'; ಪ್ರತಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಚಿಕ್ಕಬಳ್ಳಾಪುರದಲ್ಲಿ ನಡೆದ ಕಾಂಗ್ರೆಸ್‌ನ ಮನ್ರೇಗಾ ಬಚಾವ್ ಕಾರ್ಯಕ್ರಮಕ್ಕೆ ಹೆಲಿಕಾಪ್ಟರ್ ಮೂಲಕ ತೆರಳಿದ ತಮ್ಮ ನಿರ್ಧಾರವನ್ನು ಪ್ರಶ್ನಿಸಿದ ಬಿಜೆಪಿ ನಾಯಕರಿಗೆ ಉತ್ತರಿಸಿದ ಸಿಎಂ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅವಧಿಯ ವೆಚ್ಚಗಳನ್ನು ಉದಾಹರಣೆಯಾಗಿ ಮುಂದಿಟ್ಟರು.

ಬೆಂಗಳೂರು: ಚಾಪರ್ ಪ್ರಯಾಣ ವೆಚ್ಚದ ವಿಚಾರವಾಗಿ ರಾಜ್ಯ ರಾಜಕೀಯದಲ್ಲಿ ತೀವ್ರ ವಾಗ್ವಾದ ಮುಂದುವರಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಕ್ಷದ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ನಡೆದ ಕಾಂಗ್ರೆಸ್‌ನ ಮನ್ರೇಗಾ ಬಚಾವ್ ಕಾರ್ಯಕ್ರಮಕ್ಕೆ ಹೆಲಿಕಾಪ್ಟರ್ ಮೂಲಕ ತೆರಳಿದ ತಮ್ಮ ನಿರ್ಧಾರವನ್ನು ಪ್ರಶ್ನಿಸಿದ ಬಿಜೆಪಿ ನಾಯಕರಿಗೆ ಉತ್ತರಿಸಿದ ಸಿಎಂ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅವಧಿಯ ವೆಚ್ಚಗಳನ್ನು ಉದಾಹರಣೆಯಾಗಿ ಮುಂದಿಟ್ಟರು.
ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಹೆಲಿಕಾಪ್ಟರ್ ಪ್ರಯಾಣಗಳಿಗೆ ಸುಮಾರು ರೂ.37 ಕೋಟಿ ವೆಚ್ಚ ಮಾಡಲಾಗಿದೆ. ಆಗೇಕೆ ನೀವು ಪ್ರಶ್ನಿಸಲಿಲ್ಲ?” ಎಂದು ತಿರುಗೇಟು ನೀಡಿದರು.
ಮುಖ್ಯಮಂತ್ರಿಗೆ ಅನೇಕ ತುರ್ತು ಹಾಗೂ ಪ್ರಮುಖ ಕಾರ್ಯಗಳು ಇರುವುದರಿಂದ, ಕೆಲ ಸಂದರ್ಭಗಳಲ್ಲಿ ಹೆಲಿಕಾಪ್ಟರ್ ಮತ್ತು ವಿಮಾನ ಪ್ರಯಾಣ ಅನಿವಾರ್ಯವಾಗುತ್ತದೆ ಎಂದು ಸಮರ್ಥಿಸಿಕೊಂಡರು.
ವಿಧಾನ ಪರಿಷತ್‌ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಚಾಪರ್ ಪ್ರಯಾಣವನ್ನು ಸಾರ್ವಜನಿಕ ಹಣದ ವ್ಯರ್ಥ ವೆಚ್ಚ ಎಂದು ಟೀಕಿಸಿದ್ದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಪ್ರಜಾಪ್ರಭುತ್ವದಲ್ಲಿ ಟೀಕೆ ಮಾಡಲು ಅವಕಾಶವಿದ್ದರೂ ಅದು ರಚನಾತ್ಮಕವಾಗಿರಬೇಕು ಎಂದು ಹೇಳಿದರು.
ಇದಲ್ಲದೆ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರವಾಸಗಳಿಗೆ ಇದುವರೆಗೆ ರೂ.816 ಕೋಟಿ ವೆಚ್ಚವಾಗಿದೆ ಎಂದು ಉಲ್ಲೇಖಿಸಿದ ಸಿಎಂ, “ಅದು ಸಾರ್ವಜನಿಕ ಖಜಾನೆಗೆ ಹೊರೆ ಅಲ್ಲವೇ?” ಎಂದು ಪ್ರಶ್ನಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



