115 ರೂಪಾಯಿ ಪೊಂಗಲ್ ಗೆ 158 ರೂಪಾಯಿ ಶುಲ್ಕ: ಮಾಜಿ ಸಂಸದೆ ಸುಮಲತಾ ಅಂಬರೀಷ್ ಆಕ್ರೋಶ ಹೊರಹಾಕಿದ್ದು ಯಾರ ವಿರುದ್ಧ?
ಮಾಜಿ ಸಂಸದೆ ಸುಮಲತಾ ಅಂಬರೀಷ್ ತಾವು ಆರ್ಡರ್ ಮಾಡಿದ್ದ ಪೊಂಗಲ್ ದರಕ್ಕಿಂತ ಹೆಚ್ಚು ಇತರೆ ಶುಲ್ಕ ವಿಧಿಸಿದ್ದಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.

ಬೆಂಗಳೂರು: ಆನ್‌ಲೈನ್ ಫುಡ್ ಡೆಲಿವರಿ ಸೇವೆ ಇತ್ತೇಚೆಗೆ ನಗರ ಪ್ರದೇಶಗಳಲ್ಲಿ ಸಾಮಾನ್ಯವಾಗಿದೆ. ಡೆಲಿವರಿ ಚಾರ್ಜ್, ಪ್ಯಾಕಿಂಗ್ ಶುಲ್ಕ, ಪ್ಲಾಟ್‌ಫಾರ್ಮ್ ಫೀ, ಜಿಎಸ್‌ಟಿ ಸೇರಿದಂತೆ ಹಲವು ವಿಧದ ಹೆಚ್ಚುವರಿ ಶುಲ್ಕಗಳನ್ನು ಭರಿಸುತ್ತಾರೆ. ಕೆಲವೊಮ್ಮೆ ಈ ಶುಲ್ಕ ಆಹಾರದ ಬೆಲೆಯನ್ನು ಮೀರುತ್ತವೆ.
ಮಾಜಿ ಸಂಸದೆ ಸುಮಲತಾ ಅಂಬರೀಷ್ ತಾವು ಆರ್ಡರ್ ಮಾಡಿದ್ದ ಪೊಂಗಲ್ ದರಕ್ಕಿಂತ ಹೆಚ್ಚು ಇತರೆ ಶುಲ್ಕ ವಿಧಿಸಿದ ಸ್ವಿಗ್ಗಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.
115 ರೂ. ಪೊಂಗಲ್‌ಗೆ 158 ರೂ ಶುಲ್ಕ
ಸುಮಲತಾ ಅಂಬರೀಶ್ ಅವರು ರಾಮೇಶ್ವರಂ ಕೆಫೆಯಿಂದ ಪೊಂಗಲ್ ಆರ್ಡರ್ ಮಾಡಿದ್ದರು. ಆರ್ಡರ್ ಮಾಡಿದ ಆಹಾರದ ಮೂಲ ಬೆಲೆ 115 ರೂಪಾಯಿ ಮಾತ್ರವಾಗಿದ್ದರೂ, ಸ್ವಿಗ್ಗಿ ಐಟಂ ಹಾಗೂ ಇತರೆ ಶುಲ್ಕ ಸೇರಿಸಿ ಒಟ್ಟು 273 ರೂಪಾಯಿಗಳಾಗಿದೆ. ಮೂಲ 115 ರೂಪಾಯಿಯ ಪೊಂಗಲ್‌ಗೆ 158 ರೂಪಾಯಿ ಶುಲ್ಕ ವಿಧಿಸಲಾಗಿದೆ. ಇದರಿಂದ ಆಹಾರದ ಬೆಲೆಯಿಗಿಂತಲೂ ಹೆಚ್ಚು ಮೊತ್ತವನ್ನು ಡೆಲಿವರಿ ಹಾಗೂ ಇತರೆ ಶುಲ್ಕಗಳ ಹೆಸರಿನಲ್ಲಿ ಪಡೆಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, 115 ರೂಪಾಯಿಯ ಪೊಂಗಲ್‌ಗೆ 273 ಯಾಕೆ? ಆಹಾರದ ಬೆಲೆಯಿಗಿಂತ ಡಬಲ್ ಚಾರ್ಜ್ ಮಾಡುವುದು ಸರಿಯೇ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ, ಗ್ರಾಹಕರಿಗೆ ಪಾರದರ್ಶಕ ಬೆಲೆ ಮಾಹಿತಿ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



