SSLC ಪರೀಕ್ಷೆಗಳ ಅಂಕ 625 ಬದಲಿಗೆ 525ಕ್ಕೆ ಇಳಿಕೆ: ಹಿಂದಿ ಸೇರಿ ತೃತೀಯ ಭಾಷೆಗಳು ಲೆಕ್ಕಕ್ಕಿಲ್ಲ!
SSLC ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಹಿಂದಿ ಸೇರಿ ತೃತೀಯ ಭಾಷೆಗಳ ಅಂಕಗಳಿಗೆ ಕೊಕ್ ನೀಡಲಾಗಿದ್ದು ಹಿಂದಿನ ವರ್ಷಗಳಂತೆ ಅವರು 100 ಅಂಕಗಳಿಗೆ ಪರೀಕ್ಷೆ ಬರೆಯಲಿದ್ದು, ಅಂಕಪಟ್ಟಿಯಲ್ಲಿ ಗ್ರೇಡ್ ಅಂತ ನಮೂದಿಸಲಾಗುತ್ತದೆ.

ಬೆಂಗಳೂರು: SSLC ಪರೀಕ್ಷೆಯ ಅಂಕಗಳನ್ನು 625ಕ್ಕೆ ಬದಲಿಗೆ 525 ಅಂಕಗಳಿಗೆ ಇಳಿಕೆ ಮಾಡಲಾಗಿದೆ. ಹಿಂದಿ ಸೇರಿ ತೃತೀಯ ಭಾಷೆಗಳ ಅಂಕಗಳಿಗೆ ಕೊಕ್ ನೀಡಲಾಗಿದ್ದು ಹಿಂದಿನ ವರ್ಷಗಳಂತೆ ಅವರು 100 ಅಂಕಗಳಿಗೆ ಪರೀಕ್ಷೆ ಬರೆಯಲಿದ್ದು, ಅಂಕಪಟ್ಟಿಯಲ್ಲಿ ಗ್ರೇಡ್ ಅಂತ ನಮೂದಿಸಲಾಗುತ್ತದೆ.
ಬೆಂಗಳೂರಿನಲ್ಲಿದ್ದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ, ಮಧು ಬಂಗಾರಪ್ಪ, ಈ ನಿಯಮ 2026ರಲ್ಲಿ ನಡೆಯುತ್ತಿರುವ ಎಸ್ಎಸ್ಎಲ್‌ಸಿ ಪರೀಕ್ಷೆಯಿಂದಲೇ ಅನ್ವಯವಾಗಲಿದೆ ಎಂದರು. ಈ ಹಿಂದೆ 625 ಅಂಕಗಳಿಗೆ ಮಕ್ಕಳು ಪರೀಕ್ಷೆ ಬರೆಯುತ್ತಿದ್ದರು. ಆದರೆ ಈಗ ಅಂಕಪಟ್ಟಿಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆಯ 100 ಅಂಕಗಳನ್ನು ಅಂಕಪಟ್ಟಿಯಲ್ಲಿ ನಮೂದಿಸುವುದಿಲ್ಲ. 525 ಅಂಕಗಳಿಗೆ ಪ್ರತಿ ವಿದ್ಯಾರ್ಥಿಯೂ ಪಡೆದ ಅಂಕಗಳಷ್ಟೇ ಇರುತ್ತವೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


