ರಾಜ್ಯ

ಹೆದ್ದಾರಿ ಮಧ್ಯೆ ಇದ್ದಕ್ಕಿದ್ದಂತೆ ಲಾರಿ ನಿಲ್ಲಿಸಿ ತಪಾಸಣೆ: ದೇವನಹಳ್ಳಿಯಲ್ಲಿ ಭೀಕರ ಅಪಘಾತ; RTO ಅಧಿಕಾರಿಗಳ ವಿರುದ್ಧ ಆರೋಪ..! Video

ಮೂಲಗಳ ಪ್ರಕಾರ, ನೆಲಮಂಗಲ ಮೂಲದ RTO ಅಧಿಕಾರಿ ದಿನೇಶ್ ಕುಮಾರ್ ಡಿ.ಕೆ. ಅವರು ಕರ್ತವ್ಯ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತಮ್ಮ ವ್ಯಾಪ್ತಿಗೆ ಸೇರದ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಲು ಯತ್ನಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಹೆದ್ದಾರಿ ಮಧ್ಯೆ ಇದ್ದಕ್ಕಿದ್ದಂತೆ ಲಾರಿ ನಿಲ್ಲಿಸಿ ತಪಾಸಣೆ: ದೇವನಹಳ್ಳಿಯಲ್ಲಿ ಭೀಕರ ಅಪಘಾತ; RTO ಅಧಿಕಾರಿಗಳ ವಿರುದ್ಧ ಆರೋಪ..! Video
ಹೆದ್ದಾರಿಯಲ್ಲಿ ಲಾರಿ ತಡೆಯುತ್ತಿರುವ ಅಧಿಕಾರಿಗಳು
Published On :

ಬೆಂಗಳೂರು: ದೇವನಹಳ್ಳಿ ಸಮೀಪ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತ ಜನರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಪಘಾತಕ್ಕೆ RTO ಅಧಿಕಾರಿಯ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿಬಂದಿದೆ.

ಮೂಲಗಳ ಪ್ರಕಾರ, ನೆಲಮಂಗಲ ಮೂಲದ RTO ಅಧಿಕಾರಿ ದಿನೇಶ್ ಕುಮಾರ್ ಡಿ.ಕೆ. ಅವರು ಕರ್ತವ್ಯ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ತಮ್ಮ ವ್ಯಾಪ್ತಿಗೆ ಸೇರದ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಲು ಯತ್ನಿಸಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಜೀಪ್ ಅನ್ನು ರಸ್ತೆಯ ಮಧ್ಯದಲ್ಲಿ ನಿಲ್ಲಿಸಿರುವ ಅಧಿಕಾರಿಗಳು, ಹೆದ್ದಾರಿಯಲ್ಲಿ ಯಾವುದೇ ಮುನ್ನೆಚ್ಚರಿಕೆ ನೀಡದೆ ಲಾರಿಯನ್ನು ತಡೆದಿದ್ದಾರೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಮತ್ತೊಂದು ಲಾರಿ ನಿಲ್ಲಿಸಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಘಟನೆ ಬಳಿಕ ಗಾಯಾಳುಗಳಿಗೆ ಸಹಾಯ ಮಾಡುವ ಬದಲು ಅಧಿಕಾರಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಹೇಳಳಾಗುತ್ತಿದೆ. ಈ ನಡೆ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕಾನೂನು ಜಾರಿಗೆ ಜವಾಬ್ದಾರರಾಗಿರುವ ಅಧಿಕಾರಿಗಳೇ ನಿಯಮ ಉಲ್ಲಂಘಿಸಿರುವುದಕ್ಕೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.