ಪ್ರವಾಸಕ್ಕೆ ಹೊರಟಿದ್ದ ಕುಟುಂಬಕ್ಕೆ ದುರಂತ: ನಿಂತಿದ್ದ ಕಂಟೈನರ್ಗೆ ಕಾರು ಡಿಕ್ಕಿ; ಬಾಲಕಿ ಸೇರಿ ಇಬ್ಬರು ಸಾವು, ಮೂವರ ಸ್ಥಿತಿ ಗಂಭೀರ
ಮಮತಾ(36ವ) ಹಾಗೂ ಮಗಳು ಧೃತಿಕಾ(14ವ) ಸ್ಥಳದಲ್ಲಿಯೇ ಅಸುನೀಗಿದರೆ, ಪತಿ ರಾಘು(40ವ), ಮಕ್ಕಳಾದ ಜಾಹ್ನವಿ(12ವ), ಚಾರ್ವಿ(10ವ) ಹಾಗೂ ಕಾರು ಚಾಲಕ ಕಿರಣ್ ಸ್ಥಿತಿ ಗಂಭೀರವಾಗಿದೆ.

ಉಡುಪಿ: ನಿಂತಿದ್ದ ಕಂಟೈನರ್ಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಬಳಿ ಭಾನುವಾರ ಮುಂಜಾನೆ ನಡೆದಿದೆ. ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದರೆ, ಪತಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಮಮತಾ(36ವ) ಹಾಗೂ ಮಗಳು ಧೃತಿಕಾ(14ವ) ಸ್ಥಳದಲ್ಲಿಯೇ ಅಸುನೀಗಿದರೆ, ಪತಿ ರಾಘು(40ವ), ಮಕ್ಕಳಾದ ಜಾಹ್ನವಿ(12ವ), ಚಾರ್ವಿ(10ವ) ಹಾಗೂ ಕಾರು ಚಾಲಕ ಕಿರಣ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದ ನಿವಾಸಿಗಳು ಎಂಬುದು ತಿಳಿದುಬಂದಿದೆ.
ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬ ಉಡುಪಿ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿತ್ತು. ಬಳಿಕ ಮುರುಡೇಶ್ವರ ಮತ್ತು ಗೋಕರ್ಣ ಕ್ಷೇತ್ರಗಳ ದರ್ಶನದ ಉದ್ದೇಶದಿಂದ ಬೈಂದೂರು ಮಾರ್ಗವಾಗಿ ಪ್ರಯಾಣ ನಡೆಸುತ್ತಿದ್ದರು. ಗಾಯಾಳು ತಂದೆ ಮತ್ತು ಇಬ್ಬರು ಮಕ್ಕಳಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಕಾರು ಚಾಲಕ ಕಿರಣ್ನ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



