ನಾನು ತಪ್ಪು ಮಾಡಿದ್ದೇನೆ; ನನಗೆ ಪಶ್ಚಾತ್ತಾಪವಾಗಿದೆ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಆರೋಪಿ ಶಾರೀಕ್ ತಪ್ಪೊಪ್ಪಿಗೆ!
ಮಂಗಳೂರಿನಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ.

ಬೆಂಗಳೂರು: ಮಂಗಳೂರಿನಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತಪ್ಪೊಪ್ಪಿಕೊಂಡಿದ್ದು, ಆತನ ಅರ್ಜಿಯನ್ನು ಎನ್‌ಐಎ ವಿಶೇಷ ನ್ಯಾಯಾಲಯವು ಅಂಗೀಕರಿಸಿದೆ. ಪ್ರಕರಣ ಸಂಬಂಧ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಶಾರೀಕ್, 2025ರ ಡಿಸೆಂಬರ್‌ನಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 229 ಅಡಿಯಲ್ಲಿ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿದ್ದು ಕಳೆದ ಮಾರ್ಚ್ 26ರಂದು ನ್ಯಾಯಾಲಯ ಈ ಅರ್ಜಿಯನ್ನು ಅಂಗೀಕರಿಸಿದೆ.
2022ರ ನವೆಂಬರ್ 19ರಂದು ಶಿವಮೊಗ್ಗ ಮೂಲದ 27 ವರ್ಷದ ಶಾರೀಕ್, ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದನು. ಚಿಕಿತ್ಸೆ ಬಳಿಕ ಶಾರೀಕ್ ನನ್ನು ಎನ್‌ಐಎ (NIA) ಅಧಿಕಾರಿಗಳು ಬಂಧಿಸಿದ್ದರು. ಕುಕ್ಕರ್‌ನಲ್ಲಿ ಐಇಡಿ ಇಟ್ಟು ಸ್ಫೋಟ ಮಾಡಿದ್ದೇನೆ. ನನಗೆ ಪಶ್ಚಾತ್ತಾಪವಾಗಿದೆ. ಕಾನೂನು ಪ್ರಕಾರ ಕ್ರಮಕೈಗೊಳ್ಳಿ ಎಂದು ಹೇಳಿದ್ದಾನೆ. ಮೂರು ತಿಂಗಳ ವಿಚಾರಣೆ ಬಳಿಕ ನ್ಯಾಯಾಲಯವು ಈ ಅರ್ಜಿಯನ್ನು ಮಾನ್ಯಗೊಳಿಸಿದೆ.
ವಿಶೇಷ ನ್ಯಾಯಾಲಯಕ್ಕೆ ಮೂರು ತಿಂಗಳ ಹಿಂದೆ ಸಲ್ಲಿಸಿದ್ದ ತಪ್ಪೊಪ್ಪಿಗೆ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದ್ದು ಏಪ್ರಿಲ್ 10ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸಲಿದೆ. ಕುಕ್ಕರ್ ಬಾಂಬ್ ಸ್ಫೋಟ ಕುರಿತಂತೆ ಎನ್‌ಐಎ ಅಧಿಕಾರಿಗಳು ಪ್ರಕರಣದ ತನಿಖೆ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



