ಶಿವಮೊಗ್ಗ: ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆ, ಕೊಲೆ ಶಂಕೆ
ಅವರ ತೋಟದಲ್ಲೇ ಶವ ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗ: ಅಡಿಕೆ ತೋಟವೊಂದರಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರ ಮೃತದೇಹ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಸುರೇಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಇವರು ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.
ಶನಿವಾರ ಮನೆಯಿಂದ ಹೊರಟಿದ್ದ ಶಿವಕುಮಾರ್ ಅವರು ಮನೆಯವರಿಗೆ ಮದುವೆ ಕಾರ್ಯಕ್ರಮಕ್ಕೆ ಹೋಗುತ್ತಿರುವುದಾಗಿ ಹೇಳಿದ್ದರು ಎನ್ನಲಾಗಿದೆ. ಆದರೆ, ಭಾನುವಾರ ಬೆಳಿಗ್ಗೆ ಅವರದೇ ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿದ್ದ ಶವ ಪತ್ತೆಯಾಗಿದ್ದು, ಘಟನೆ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ.
ಅವರ ತೋಟದಲ್ಲೇ ಶವ ಬೆಂಕಿ ಹೊತ್ತಿ ಉರಿಯುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಕ್ಕಪಕ್ಕದ ತೋಟದವರು ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕಾಗಮಿಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಾಗಲೇ ಮೃತದೇಹ ಭಾಗಶಃ ಸುಟ್ಟು ಕರಕಲಾಗಿತ್ತು ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲೇ ಮೃತ ವ್ಯಕ್ತಿಯ ಬೈಕ್ ಮತ್ತು ಬ್ಯಾಗ್'ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪ್ರಕರಣದಲ್ಲಿ ಕೊಲೆ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ಮೃತ ವ್ಯಕ್ತಿಯ ಫೋನ ವಶಕ್ಕೆ ಪಡೆದು, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣಗಳು ತಿಳಿದುಬರಲಿದೆ.
ಈ ನಡುವೆ ಈವರೆಗೆ ಕುಟುಂಬದವರು ಯಾರ ಮೇಲೂ ಅನುಮಾನ ವ್ಯಕ್ತಪಡಿಸಿಲ್ಲ. ಆದರೆ, ಎಲ್ಲಾ ಆಯಾಮದಲ್ಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ಸ್ಥಳಕ್ಕೆ ಅಪರಾಧ ಪರಿಶೀಲನಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇನ್ಸ್‌ಪೆಕ್ಟರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿ, ತನಿಖೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



