ವಾಣಿಜ್ಯ LPG ಸಿಲಿಂಡರ್ ಪೂರೈಕೆ ಶೇ 68ರಷ್ಟು ಹೆಚ್ಚಳ: ಆದ್ಯತೆಗನುಗುಣವಾಗಿ ಹಂಚಿಕೆ..!
ಭಾನುವಾರದಿಂದ ಪ್ರತಿದಿನ 29,463 ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳನ್ನು ಪೂರೈಸಲಾಗುತ್ತಿದ್ದು, ಹೋಟೆಲ್ ಮತ್ತು ಉಪಹಾರ ಗೃಹಗಳಿಗೆ ದಿನಕ್ಕೆ 17,500 ಸಿಲಿಂಡರ್‌ಗಳನ್ನು ವಿತರಿಸಲಾಗುತ್ತಿದೆ. ಇದರಿಂದ ಅವರ ಸಾಮಾನ್ಯ ಬೇಡಿಕೆಯ 60 ಶೇಕಡದಷ್ಟು ಪೂರೈಕೆ ಸಾಧ್ಯವಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಎಲ್‌ಪಿಜಿ ಕೊರತೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡುತ್ತಿದ್ದ ಎಲ್‌ಪಿಜಿ ಹಂಚಿಕೆಯನ್ನು ಶೇ.68ಕ್ಕೆ ಹೆಚ್ಚಿಸಿದ್ದು, ಇದೀಗ ಅಗತ್ಯ ಹಾಗೂ ಆದ್ಯತೆಗೆ ತಕ್ಕಂತೆ ವಿತರಣೆಯನ್ನು ಆರಂಭಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರದಿಂದ ಪ್ರತಿದಿನ 29,463 ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳನ್ನು ಪೂರೈಸಲಾಗುತ್ತಿದ್ದು, ಹೋಟೆಲ್ ಮತ್ತು ಉಪಹಾರ ಗೃಹಗಳಿಗೆ ದಿನಕ್ಕೆ 17,500 ಸಿಲಿಂಡರ್‌ಗಳನ್ನು ವಿತರಿಸಲಾಗುತ್ತಿದೆ. ಇದರಿಂದ ಅವರ ಸಾಮಾನ್ಯ ಬೇಡಿಕೆಯ 60 ಶೇಕಡದಷ್ಟು ಪೂರೈಕೆ ಸಾಧ್ಯವಾಗಿದೆ ಎಂದು ಹೇಳಿದರು.
ಆದ್ಯತೆ ಕ್ರಮದಲ್ಲಿ ವಿತರಣೆಯ ಭಾಗವಾಗಿ ಶಿಕ್ಷಣ ಸಂಸ್ಥೆಗಳು ಮತ್ತು ವಸತಿಗೃಹಗಳಿಗೆ 4,200 ಸಿಲಿಂಡರ್‌ಗಳು, ವಿಮಾನ ನಿಲ್ದಾಣ, ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣಗಳಿಗೆ 1,200 ಸಿಲಿಂಡರ್‌ಗಳು, ಬೀಜ ಸಂಸ್ಕರಣಾ ಘಟಕಗಳು ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಿಗೆ 6,000 ಸಿಲಿಂಡರ್‌ಗಳನ್ನು ಪೂರೈಸಲಾಗುತ್ತಿದೆ. ಅಗತ್ಯವಿರುವವರಿಗೆ 563 ಸಿಲಿಂಡರ್‌ಗಳನ್ನು ವಿಶೇಷವಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಇದೇ ವೇಳೆ ಸಾಮಾನ್ಯ ಜನರಿಗೆ ಪರಿಸ್ಥಿತಿ ಸುಧಾರಿಸುವವರೆಗೆ ಎಲ್‌ಪಿಜಿ ಬಳಕೆಯನ್ನು ಮಿತವಾಗಿ ಬಳಸುವಂತೆ ಸಚಿವರು ಮನವಿ ಮಾಡಿದ್ದು, ಸಾಧ್ಯವಾದಲ್ಲಿ ವಿದ್ಯುತ್ ಸ್ಟೌವ್ ಹಾಗೂ ಮರದ ಇಂಧನ ಬಳಕೆ ಮಾಡುವಂತೆ ಸಲಹೆ ನೀಡಿದರು.
ಬಳಿಕ ಆಟೋ ಎಲ್‌ಪಿಜಿ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ತಿಳಿಸಿದ ಸಚಿವರು, ರಾಜ್ಯದಾದ್ಯಂತ 72 ಕೇಂದ್ರಗಳಲ್ಲಿ, ಮುಖ್ಯವಾಗಿ ಬೆಂಗಳೂರಿನಲ್ಲಿ 31 ಕೇಂದ್ರಗಳಲ್ಲಿ ಆಟೋ ಎಲ್‌ಪಿಜಿ ಲಭ್ಯವಿದೆ. ಪ್ರತಿ ಲೀಟರ್‌ಗೆ 77.74 ರೂ. ದರದಲ್ಲಿ ಪೂರೈಕೆ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇತ್ತೀಚಿನ ದಿನಗಳಲ್ಲಿ ಆಟೋ ಎಲ್‌ಪಿಜಿ ಪೂರೈಕೆ ಹೆಚ್ಚಳ ಕಂಡಿದ್ದು, ದಿನಕ್ಕೆ ಸರಾಸರಿ 64.9 ಟನ್ ವಿತರಣೆ ಆಗುತ್ತಿದೆ. ಮಧ್ಯಪ್ರಾಚ್ಯ ಸಂಘರ್ಷಕ್ಕೂ ಮುನ್ನ ಇದು 57.6 ಟನ್ ಮಾತ್ರವಾಗಿತ್ತು ಎಂದು ಸಚಿವರು ಮಾಹಿತಿ ನೀಡಿದರು.
ಅಕ್ರಮ ಸಂಗ್ರಹಣೆ ಮತ್ತು ಕಾಳಸಂತೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಇದುವರೆಗೆ 27 ಎಫ್‌ಐಆರ್‌ಗಳು ಮತ್ತು 1,169 ಪ್ರಕರಣಗಳು ದಾಖಲಾಗಿವೆ. ಒಟ್ಟು 1,603 ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.
ಇದೇ ವೇಳೆ ಗ್ಯಾಸ್ ಸಿಲಿಂಡರ್‌ಗಳನ್ನು ಹೆಚ್ಚುವರಿ ದರಕ್ಕೆ ಮಾರಾಟ ಮಾಡುವ ವಿತರಕರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ ಸಚಿವರು, ಇಂತಹವರ ಪರವಾನಗಿ ರದ್ದುಪಡಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



