ದೇವನಹಳ್ಳಿ: ರಾಮನವಮಿ ಪ್ರಸಾದ ಸೇವಿಸಿ ಗ್ರಾಮಸ್ಥರು ಅಸ್ವಸ್ಥ!
ಪ್ರಸಾದ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡವರನ್ನು ಅರದೇಶನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 200ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದಿದ್ದಾರೆ.ಬಹುತೇಕರು ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ.

ದೇವನಹಳ್ಳಿ: ಶ್ರೀರಾಮನವಮಿ ಹಬ್ಬದ ಅಂಗವಾಗಿ ದೇವನಹಳ್ಳಿ ತಾಲೂಕಿನ ಬೆಟ್ಟೇನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ವಿತರಿಸಿದ ಪ್ರಸಾದ ಸೇವಿಸಿ ಗ್ರಾಮಸ್ಥರು ಅಸ್ವಸ್ಥಗೊಂಡ ಘಟನೆ ನಡೆದಿದೆ.
ಪ್ರಸಾದ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡವರನ್ನು ಅರದೇಶನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 200ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದಿದ್ದಾರೆ.ಬಹುತೇಕರು ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ.
ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮದಲ್ಲಿ ಬೀಡು ಬಿಟ್ಟು ಆರೋಗ್ಯ ತಪಾಸಣೆ ಮಾಡುತ್ತಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಶನಿವಾರ ರಾತ್ರಿ 10 ಗಂಟೆ ಸುಮಾರಿಗೆ ಪ್ರಸಾದ ಸೇವಿಸಿದ ಕೆಲವು ಗ್ರಾಮಸ್ಥರಿಗೆ ಹೊಟ್ಟೆನೋವು, ವಾಂತಿ-ಭೇದಿಯಾಗಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು. ಕೆಲವರು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಶಾ ತಂಡ, ಆರ್ಆರ್ಟಿ ತಂಡ, ಆರೋಗ್ಯ ಸಿಬ್ಬಂದಿ ಮನೆ ಮನೆಗೆ ಭೇಟಿ ಕೊಟ್ಟು ಮಾಹಿತಿ ಪಡೆದು ಚಿಕಿತ್ಸೆ ಕೊಡುತ್ತಿದ್ದಾರೆ” ಎಂದು ಲಕ್ಕಷಾ ಕೃಷ್ಣ ರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು.
ಅನ್ನ ಪ್ರಸಾದದಲ್ಲಿದ್ದ ಆಹಾರ ಮತ್ತು ಪದಾರ್ಥಗಳನ್ನು ಟೆಸ್ಟಿಂಗ್ಗಾಗಿ ಕಳಿಸಿದ್ದೇವೆ. ಅಡುಗೆ ತಯಾರಿಕೆಗೆ ಬಳಸಿರುವ ನೀರನ್ನೂ ಸಹ ಟೆಸ್ಟಿಂಗ್ಗಾಗಿ ಕಳಿಸಿದ್ದೇವೆ. ಒಂದು ದಿನದಲ್ಲಿ ರಿಪೋರ್ಟ್ ಬರಲಿದ್ದು, ಘಟನೆಗೆ ಏನು ಕಾರಣ ಎಂಬುದು ತಿಳಿದು ಬರಲಿದೆ ಎಂದು ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



