ಮುಂದಿನ 2 ದಿನ ರಾಜ್ಯದಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದ್ದು ಹಲವು ಜಿಲ್ಲೆಗಳಿಗೆ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಕಲಬುರಗಿ, ವಿಜಯಪುರ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಉಳಿದ ಭಾಗಗಳಲ್ಲಿಯೂ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆಗಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



