Bengaluru: ಪಾರ್ಕಿಂಗ್ ವಿಚಾರಕ್ಕೆ ಜಗಳ: ಮಹಿಳೆಗೆ ಹಿಗ್ಗಾಮುಗ್ಗ ಥಳಿಸಿದ ಯುವಕ.. ಆಗಿದ್ದೇನು? Video
ಪಾರ್ಕಿಂಗ್ ಜಾಗದ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನೋಡನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್ ಪ್ರಕರಣ ವರದಿಯಾಗಿದ್ದು, ಪಾರ್ಕಿಂಗ್ ವಿಚಾರಕ್ಕೆ ನಡೆದ ಜಗಳ ಪರಸ್ಪರ ಕೈಕೈ ಮಿಲಾಯಿಸುವಂತಾಗಿದೆ.
ಹೌದು.. ನಗರದಲ್ಲಿ ಪಾರ್ಕಿಂಗ್ ಸಮಸ್ಯೆ ದಿನದಿಂದ ದಿನಕ್ಕೆ ವಿಕೋಪಕ್ಕೆ ಹೋಗಿದ್ದು, ಸಣ್ಣ ವಿಚಾರಕ್ಕೂ ಜನರು ಬೀದಿಯಲ್ಲಿ ಹೊಡೆದಾಡುವ ಹಂತಕ್ಕೆ ತಲುಪಿದ್ದಾರೆ.
ಇದಕ್ಕೆ ತಾಜಾ ಉದಾಹರಣೆ ಎಂಬಂತೆ, ಬೆಂಗಳೂರಿನ ಪ್ರತಿಷ್ಠಿತ ಬಿಎಂಎಸ್ ಇಂಜಿನಿಯರಿಂಗ್ ಕಾಲೇಜಿನ ಎಪಿಎಸ್ ಬಿಲ್ಡಿಂಗ್ ಬಳಿ ಪಾರ್ಕಿಂಗ್ ವಿಚಾರವಾಗಿ ದೊಡ್ಡ ಗಲಾಟೆ ನಡೆದಿದೆ.
ಪಾರ್ಕಿಂಗ್ ಜಾಗದ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನೋಡನೋಡುತ್ತಿದ್ದಂತೆ ವಿಕೋಪಕ್ಕೆ ತಿರುಗಿದೆ. ಮಹಿಳೆ ಹಾಗೂ ಯುವಕನ ನಡುವೆ ಗಲಾಟೆ ನಡೆದು ಪರಸ್ಪರ ಕೈಕೈ ಮಿಲಾಯಿಸಿದ್ದು, ರಸ್ತೆ ಮಧ್ಯೆಯೇ ಸಿನಿಮೀಯ ಶೈಲಿಯಲ್ಲಿ ಹೊಡೆದಾಡಿಕೊಂಡಿದ್ದಾರೆ.
ಸ್ಥಳೀಯರ ಪ್ರಕಾರ ಯುವಕ ತನ್ನ ಬೈಕ್ ನಿಲ್ಲಿಸಿದ್ದ ಜಾಗದಲ್ಲೇ ಮಹಿಳೆ ಮತ್ತು ಆಕೆಯ ಕುಟುಂಬಸ್ಥರು ಆಟೋದಲ್ಲಿ ಬಂದು ಬೈಕ್ ತೆಗೆಯುವಂತೆ ಹೇಳಿದ್ದಾರೆ.
ಯುವಕ ನಾನು ಇಲ್ಲಿ ತನ್ನ ಬೈಕ್ ಪಾರ್ಕ್ ಮಾಡಬೇಕು ಎಂದು ಹೇಳಿದಾಗ ಮಹಿಳೆ ವಾಗ್ವಾದ ನಡೆಸಿದ್ದಾರೆ. ಬಳಿಕ ವಾಗ್ವಾದ ವಿಕೋಪಕ್ಕೆ ತಿರುಗಿದಾಗ ಮಹಿಳೆ ಮೇಲೆ ಯುವಕ ಹಲ್ಲೆ ಮಾಡಿದ್ದಾನೆ. ಈ ವೇಳೆ ಮಹಿಳೆ ಮತ್ತು ಆಕೆಯ ಕುಟುಂಬಸ್ಥರೂ ಕೂಡ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಸಾರ್ವಜನಿಕರು ನೋಡುತ್ತಿದ್ದರೂ ಲೆಕ್ಕಿಸದೆ ಬಡಿದಾಡಿಕೊಂಡಿರುವುದು ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.
ವಿಡಿಯೋದಲ್ಲಿ ಗುಂಪೊಂದು ಒಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸುತ್ತಿರುವುದು ಮತ್ತು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿರುವುದು ಕಂಡುಬಂದಿದೆ. ನಗರದ ಶಿಕ್ಷಣ ಸಂಸ್ಥೆಗಳ ಹತ್ತಿರವೇ ಇಂತಹ ಅಶಿಸ್ತಿನ ವರ್ತನೆಗಳು ನಡೆಯುತ್ತಿರುವುದು ಪೋಷಕರು ಮತ್ತು ಸ್ಥಳೀಯ ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



