ಕನ್ನಡ ಭಾಷೆ, ಸಂಸ್ಕೃತಿಗೆ ಗೌರವ ನೀಡಿ: ಸಿಬ್ಬಂದಿ-ವಿದ್ಯಾರ್ಥಿಗಳಿಗೆ VTU ಆದೇಶ
ವಿಶ್ವವಿದ್ಯಾಲಯವು ಸಂಯೋಜಿತ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಅನುಸರಿಸಬೇಕಾದ ನಿಯಮಾವಳಿಗಳನ್ನು ಹೊರಡಿಸಿದೆ. ಈ ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ತನ್ನ ಎಲ್ಲಾ ಸಂಯೋಜಿತ ಕಾಲೇಜುಗಳು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸೇರಿ ಎಲ್ಲರೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಗೌರವಿಸುವಂತೆ ಅಧಿಸೂಚನೆಗಳನ್ನು ಹೊರಡಿಸಿದೆ.
ವಿಶ್ವವಿದ್ಯಾಲಯವು ಸಂಯೋಜಿತ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಅನುಸರಿಸಬೇಕಾದ ನಿಯಮಾವಳಿಗಳನ್ನು ಹೊರಡಿಸಿದೆ. ಈ ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಕಾಲೇಜುಗಳು ಈ ವಿಷಯವನ್ನು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ತಿಳಿಸಬೇಕು. ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಅವಮಾನಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ (KDA) ಕಡೆಯಿಂದ ಬಂದ ಪತ್ರದ ಹಿನ್ನೆಲೆ, ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿದ ಕಾಲೇಜುಗಳು ಮತ್ತು ವಸತಿಗೃಹಗಳಲ್ಲಿ ಕನ್ನಡ ಭಾಷೆಗೆ ಗೌರವ ದೊರಕುವಂತೆ ಈ ಸೂಚನೆಗಳನ್ನು ನೀಡಲಾಗಿದೆ.
ಇದು ಬೆಂಗಳೂರು ನಗರದ AMC ಇಂಜಿನಿಯರಿಂಗ್ ಕಾಲೇಜಿನಲ್ಲಿ ವರದಿಯಾದ ಘಟನೆಯ ನಂತರ ಆದೇಶ ಬಂದಿದೆ. ಅಲ್ಲಿ ಹಾಸ್ಟೆಲ್ ವಾರ್ಡನ್, ವಿದ್ಯಾರ್ಥಿಗಳು ಹಿಂದಿಯಲ್ಲಿ ಮಾತನಾಡಬೇಕು ಎಂದು ಒತ್ತಾಯಿಸಿದ್ದಾರೆ ಎಂಬ ಆರೋಪ ಬಂದಿತ್ತು. ಕನ್ನಡದಲ್ಲಿ ಮಾತನಾಡುತ್ತಿದ್ದ ವಿದ್ಯಾರ್ಥಿಯನ್ನು ತರಾಟೆಗೆ ತೆಗೆದುಕೊಂಡು, ಹಿಂದಿಯಲ್ಲಿ ಮಾತನಾಡುವಂತೆ ಮತ್ತು ಕನ್ನಡವನ್ನು ಮನೆಯಲ್ಲಿ ಮಾತ್ರ ಬಳಸುವಂತೆ ಹೇಳಿದ ವಿಡಿಯೋ ವೈರಲ್ ಆಗಿತ್ತು.
ಈ ಘಟನೆಯ ಬಳಿಕ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿ, ವಾರ್ಡನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.
VTU ಉಪ ಕುಲಪತಿ ವಿದ್ಯಾಶಂಕರ ಎಸ್, ಕನ್ನಡ ನಮ್ಮ ನೆಲದ ಭಾಷೆ ಆಗಿದ್ದು, ಅದನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಹೊಣೆ. ನಮ್ಮ ವಿಶ್ವವಿದ್ಯಾಲಯದಡಿಯಲ್ಲಿ 220 ಸಂಯೋಜಿತ ಕಾಲೇಜುಗಳಿದ್ದು, ಸುಮಾರು 3 ಲಕ್ಷ ವಿದ್ಯಾರ್ಥಿಗಳಿದ್ದಾರೆ. ಕರ್ನಾಟಕದ ಹೊರಗಿನಿಂದ ಮತ್ತು ಭಾರತದೆಲ್ಲೆಡೆಯಿಂದ ವಿದ್ಯಾರ್ಥಿಗಳು ಬರುತ್ತಿರುವುದರಿಂದ, ಎಲ್ಲಾ ಮಟ್ಟಗಳಲ್ಲೂ ಕನ್ನಡಕ್ಕೆ ಗೌರವ ದೊರಕುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ. ಕೆಲವು ಅಪ್ರಿಯ ಘಟನೆಗಳು ವರದಿಯಾಗಿರುವುದರಿಂದ, ಇಂತಹ ಘಟನೆಗಳನ್ನು ತಡೆಯಲು ಮಾರ್ಗಸೂಚಿಗಳನ್ನು ಹೊರಡಿಸಿದ್ದೇವೆ. ಕನ್ನಡ ಸಂಬಂಧಿತ ಸೂಚನೆಗಳನ್ನು ಯಾರಾದರೂ ಉಲ್ಲಂಘಿಸಿದರೆ, ಕಾನೂನು ಪ್ರಕಾರ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ತರಗತಿಯೊಳಗೆ, ಕ್ಯಾಂಪಸ್‌ನಲ್ಲಿ ಅಥವಾ ವಸತಿಗೃಹಗಳಲ್ಲಿ, ಯಾವುದೇ ವಿದ್ಯಾರ್ಥಿ ಅಥವಾ ಸಿಬ್ಬಂದಿ ಕನ್ನಡವನ್ನು ಅವಮಾನಿಸುವ ಪದಗಳನ್ನು ಬಳಸಬಾರದು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಇತ್ತೀಚೆಗೆ, ಕನ್ನಡವನ್ನು ಉತ್ತೇಜಿಸಲು ಮತ್ತು ಎಲ್ಲಾ ಮಟ್ಟಗಳಲ್ಲಿ ಅದರ ಅನುಷ್ಠಾನ ತರಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಕನ್ನಡ ಸಂಘವನ್ನು ಸ್ಥಾಪಿಸಿರುವುದನ್ನು ಇಲ್ಲಿ ಸ್ಮರಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



