ನಕಲಿ ನೇಮಕಾತಿ ವಂಚನೆಗೆ ಬಲಿಯಾಗದಿರಿ: ಜನತೆಗೆ ಆರೋಗ್ಯ ಇಲಾಖೆ ಮನವಿ
ಎಲ್ಲ ಸರ್ಕಾರಿ ನೇಮಕಾತಿಗಳು ನಿಗದಿತ ನಿಯಮಗಳು ಮತ್ತು ಅಧಿಕೃತ ಅಧಿಸೂಚನೆಗಳ ಮೂಲಕವೇ ನಡೆಯುತ್ತವೆ.

ಬೆಂಗಳೂರು: ಸರ್ಕಾರಿ ಸಂಸ್ಥೆಗಳ ಹೆಸರಿನಲ್ಲಿ ನಕಲಿ ನೇಮಕಾತಿ ಪತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಲಾಗುತ್ತಿದ್ದು, ಉದ್ಯೋಗದ ಆಮಿಷ ನೀಡಿ ಹಣ ವಸೂಲಿ ಮಾಡುವ ಘಟನೆಗಳು ಹೆಚ್ಚುತ್ತಿವೆ. ಹೀಗಾಗಿ ಜನರು ಎಚ್ಚರಿಕೆಯಿಂದಿರಬೇಕೆಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.
ಈ ಕುರಿತು ಹೇಳಿಕೆ ನೀಡಿರುವ ಇಲಾಖೆ, ವಂಚಕರು ಕೃತಕ ನೇಮಕಾತಿ ಆದೇಶಗಳನ್ನು ಸೃಷ್ಟಿಸಿ, ವಾಟ್ಸಾಪ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಹಂಚಿಕೊಳ್ಳುತ್ತಿದ್ದಾರೆ. ಸರ್ಕಾರದ ಉದ್ಯೋಗ ನೀಡುವುದಾಗಿ ಹೇಳಿ ಅಭ್ಯರ್ಥಿಗಳಿಂದ ಹಣ ಪಡೆಯುವ ಪ್ರಯತ್ನಗಳು ನಡೆಸುತ್ತಿದ್ದಾರೆಂದು ಇಲಾಖೆ ಎಚ್ಚರಿಸಿದೆ.
ಎಲ್ಲ ಸರ್ಕಾರಿ ನೇಮಕಾತಿಗಳು ನಿಗದಿತ ನಿಯಮಗಳು ಮತ್ತು ಅಧಿಕೃತ ಅಧಿಸೂಚನೆಗಳ ಮೂಲಕವೇ ನಡೆಯುತ್ತವೆ. ಹೀಗಾಗಿ ಅನಧಿಕೃತ ಮೂಲಗಳು ಅಥವಾ ಮಧ್ಯವರ್ತಿಗಳ ಮೂಲಕ ನೀಡಲಾಗುವ ಉದ್ಯೋಗ ಆಫರ್‌ಗಳು ಮತ್ತು ನೇಮಕಾತಿ ಪತ್ರಗಳನ್ನು ನಂಬಬಾರದು ಎಂದು ಮನವಿ ಮಾಡಿದೆ.
ಅಲ್ಲದೆ, ಯಾವುದೇ ಅನುಮಾನಾಸ್ಪದ ನೇಮಕಾತಿ ಸಂದೇಶಗಳು ಅಥವಾ ವಂಚನಾ ಚಟುವಟಿಕೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡುವಂತೆಯೂ ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



