ಶಿಕ್ಷಣ ಕ್ಷೇತ್ರಕ್ಕೆ ಬಲ: 10,419 ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..!
ಯುಜಿಸಿ ಮಾನದಂಡಗಳನ್ನು ಪೂರೈಸದ 3,853 ಅತಿಥಿ ಉಪನ್ಯಾಸಕರನ್ನು “ಶಿಕ್ಷಣ ಸಂಯೋಜಕರು” (Education Coordinators) ಆಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ.

ಬೆಂಗಳೂರು: ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆ ನಿವಾರಿಸಲು ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಉನ್ನತ ಶಿಕ್ಷಣ ಇಲಾಖೆಯು 10,419 ಅತಿಥಿ ಉಪನ್ಯಾಸಕರನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಲು ನಿರ್ಧರಿಸಿದೆ.
ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಸರ್ಕಾರವು 11,100 ಅತಿಥಿ ಉಪನ್ಯಾಸಕರನ್ನು ನೇಮಿಸಲು ನಮಗೆ ಅನುಮತಿ ನೀಡಿದ್ದು, ನಾವು 10,419 ಅಭ್ಯರ್ಥಿಗಳನ್ನು ಆನ್‌ಲೈನ್ ಕೌನ್ಸೆಲಿಂಗ್ ಮೂಲಕ ಆಯ್ಕೆ ಮಾಡಿದ್ದೇವೆ. ಈ ನೇಮಕಾತಿ ತಾತ್ಕಾಲಿಕವಾಗಿದ್ದು, ಶಾಶ್ವತ ಹುದ್ದೆಗಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ, ಯುಜಿಸಿ ಮಾನದಂಡಗಳನ್ನು ಪೂರೈಸದ 3,853 ಅತಿಥಿ ಉಪನ್ಯಾಸಕರನ್ನು “ಶಿಕ್ಷಣ ಸಂಯೋಜಕರು” (Education Coordinators) ಆಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ.
ಈ ಹುದ್ದೆಗಳನ್ನು 2026–27 ಶೈಕ್ಷಣಿಕ ವರ್ಷದಿಂದ ಜಾರಿಗೆ ತರಲಾಗುತ್ತದೆ. ಇವರಿಗೆ ಪ್ರಯೋಗಾಲಯ ಕಾರ್ಯಗಳಲ್ಲಿ ಸಹಾಯ ಮಾಡುವುದು ಹಾಗೂ ಶೈಕ್ಷಣಿಕ ಮತ್ತು ಅಶೈಕ್ಷಣಿಕ ಚಟುವಟಿಕೆಗಳಲ್ಲಿ ಬೆಂಬಲ ನೀಡುವ ಜವಾಬ್ದಾರಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಈ ಕ್ರಮವನ್ನು ಮಾನವೀಯ ದೃಷ್ಟಿಕೋನದಿಂದ ಕೈಗೊಳ್ಳಲಾಗಿದ್ದು, ಅನುಭವ ಆಧಾರಿತ ವೇತನ ವ್ಯವಸ್ಥೆಯಡಿ 5–10 ವರ್ಷ ಅನುಭವ ಹೊಂದಿರುವವರಿಗೆ ರೂ.28,000, 10–15 ವರ್ಷ ಅನುಭವಿಗಳಿಗೆ ರೂ.29,000 ಹಾಗೂ 15 ವರ್ಷಕ್ಕಿಂತ ಹೆಚ್ಚು ಅನುಭವಿಗಳಿಗೆ ರೂ.30,000 ವೇತನ ನಿಗದಿಪಡಿಸಲಾಗಿದೆ. ಜೊತೆಗೆ ಇವರಿಗೆ ವೈದ್ಯಕೀಯ ವಿಮೆ ಸೌಲಭ್ಯವೂ ಒದಗಿಸಲಾಗುತ್ತದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



