ರಾಜ್ಯ

ತುಮಕೂರಿನಲ್ಲಿ 44 ನವಿಲುಗಳ ಸಾವಿಗೆ ಹಕ್ಕಿಜ್ವರ ಕಾರಣ: ICAR ಪರೀಕ್ಷೆಯಿಂದ ದೃಢ!

ಆದಾಗ್ಯೂ, ಏಪ್ರಿಲ್ 23 ರಿಂದ ತುಮಕೂರು ತಾಲ್ಲೂಕಿನ ಯಾವುದೇ ಭಾಗದಲ್ಲಿ ಹೊಸ ಸಾವುಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತುಮಕೂರಿನಲ್ಲಿ 44 ನವಿಲುಗಳ ಸಾವಿಗೆ ಹಕ್ಕಿಜ್ವರ ಕಾರಣ: ICAR ಪರೀಕ್ಷೆಯಿಂದ ದೃಢ!
ನವಿಲು ಸಾಂದರ್ಭಿಕ ಚಿತ್ರ
Published On :

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹಕ್ಕಿಜ್ವರ H5N1 ಸೋಂಕಿನಿಂದ 44 ನವಿಲುಗಳ ಸಾವನ್ನಪ್ಪಿವೆ ಎಂದು ಪ್ರಯೋಗಾಲಯದ ವರದಿಗಳು ದೃಢಪಡಿಸಿವೆ.

ಏಪ್ರಿಲ್ 16 ರಂದು ಘಟನೆ ಮೊದಲಿಗೆ ವರದಿಯಾಗಿತ್ತು. ತದನಂತರ ಒಂದು ವಾರದ ಅವಧಿಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 44 ನವಿಲುಗಳು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದವು. ವ್ಯಾಪಕವಾದ ಕಾರ್ಯಾಚರಣೆ ಸಮಯದಲ್ಲಿ ಕೆಸರಮಾಡು, ಹಿರೇಹಳ್ಳಿ ಮತ್ತು ಗೂಳೂರು ಗ್ರಾಮ ಪಂಚಾಯತ್‌ಗಳ ಕೃಷಿ ಹೊಲಗಳಲ್ಲಿ ನವಿಲುಗಳು ಸಾವಿನ ಬಗ್ಗೆ ವರದಿಯಾಗಿರುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಅರಣ್ಯ ಇಲಾಖೆಯ ಪ್ರಕಾರ, ಮೃತಪಟ್ಟ ನವಿಲುಗಳಿಂದ ಸಂಗ್ರಹಿಸಲಾದ ಮಾದರಿಗಳನ್ನು ಭೋಪಾಲ್‌ನಲ್ಲಿರುವ ICAR (National Institute of High Security Animal Diseases)ಕಳುಹಿಸಲಾಗಿತ್ತು. ಇದು H5N1 ಸಾವಿಗೆ ಕಾರಣ ಎಂದು ದೃಢಪಡಿಸಿದೆ.

ಆದಾಗ್ಯೂ, ಏಪ್ರಿಲ್ 23 ರಿಂದ ತುಮಕೂರು ತಾಲ್ಲೂಕಿನ ಯಾವುದೇ ಭಾಗದಲ್ಲಿ ಹೊಸ ಸಾವುಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯೋಗಾಲಯದ ವರದಿಗಳು,H5N1 ಸೋಂಕಿನಿಂದ ನವಿಲುಗಳು ಸಾವನ್ನಪ್ಪಿವೆ ಎಂದು ದೃಢಪಡಿಸಿವೆ. ಸೋಂಕನ್ನು ತಡೆಗಟ್ಟಲು ಅರಣ್ಯ ಇಲಾಖೆಯು ಆರೋಗ್ಯ ಮತ್ತು ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಇಲಾಖೆಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಕುಮಾರ್ ಪುಷ್ಕರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಸೋಂಕು ಹರಡುವುದನ್ನು ತಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಸೋಂಕು ಪೀಡಿತ ಪ್ರದೇಶಗಳ 10 ಕಿಮೀ ವ್ಯಾಪ್ತಿಯಲ್ಲಿ ಕಂಟೈನ್ಮೆಂಟ್ ವಲಯವನ್ನು ಘೋಷಿಸಲಾಗಿದೆ. ವಲಯದೊಳಗಿನ ಎಲ್ಲಾ ಕೋಳಿ ಸಾಕಣೆ ಕೇಂದ್ರಗಳಿಗೆ ಪ್ರೋಟೋಕಾಲ್ ಪ್ರಕಾರ ಎಚ್ಚರಿಕೆ ನೀಡಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.