ರಾಜ್ಯ

ಜನಿವಾರ, ಹಿಜಾಬ್ ಸಮಸ್ಯೆಗೊಳದಾದ ವಿದ್ಯಾರ್ಥಿಗಳಿಗೆ CET ಮರುಪರೀಕ್ಷೆ; ಗ್ರೇಸ್ ಅಂಕ ಇಲ್ಲ: ಡಾ ಎಂ.ಸಿ ಸುಧಾಕರ್

ನಿನ್ನೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಲ್ವರು ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆ ಆಗಿದೆ. ಹಾಗಾಗಿ ಆ ವಿದ್ಯಾರ್ಥಿಗಳಿಗೆ ಮಾತ್ರ ಮರುಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದರು.

ಜನಿವಾರ, ಹಿಜಾಬ್ ಸಮಸ್ಯೆಗೊಳದಾದ ವಿದ್ಯಾರ್ಥಿಗಳಿಗೆ CET ಮರುಪರೀಕ್ಷೆ; ಗ್ರೇಸ್ ಅಂಕ ಇಲ್ಲ: ಡಾ ಎಂ.ಸಿ ಸುಧಾಕರ್
ಡಾ ಎಂ ಸಿ ಸುಧಾಕರ್
Published On :

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ವಸ್ತ್ರಸಂಹಿತೆಯಿಂದ ಸಮಸ್ಯೆಗೆ ಒಳಗಾದ ಪರೀಕ್ಷಾರ್ಥಿಗಳಿಗೆ ಮರು ಪರೀಕ್ಷೆ ನಡೆಸುವುದಾಗಿ ಉನ್ನತ ಶಿಕ್ಷಣ ಸಚಿವ ಡಾ ಎಂ.ಸಿ ಸುಧಾಕರ್‌ ತಿಳಿಸಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಲ್ವರು ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆ ಆಗಿದೆ. ಹಾಗಾಗಿ ಆ ವಿದ್ಯಾರ್ಥಿಗಳಿಗೆ ಮಾತ್ರ ಮರುಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದರು.

ಜನಿವಾರ ಹಾಗೂ ಹಿಜಾಬ್ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಎರಡು ಪರೀಕ್ಷಾ ಕೇಂದ್ರದಲ್ಲಿ ಗೊಂದಲ ಆಗಿತ್ತು. ಆದ್ದರಿಂದ ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಮನವಿ ಮಾಡಿದ್ದರು. ಹೀಗಾಗಿ ತೊಂದರೆಗೆ ಒಳಗಾದ ಪರೀಕ್ಷಾರ್ಥಿಗಳಿಗೆ ಮಾತ್ರ ಅನ್ವಯ ಆಗುವಂತೆ ಮರುಪರೀಕ್ಷೆ ನಡೆಸುತ್ತೇವೆ ಹೇಳಿದರು.

ಗ್ರೇಸ್ ಅಂಕ ಇಲ್ಲ

ಪರೀಕ್ಷೆ ಗೊಂದಲಕ್ಕೆ ಒಳಗಾದ ಪರೀಕ್ಷಾರ್ಥಿಗಳಿಗೆ ಗ್ರೇಸ್ ಅಂಕ ನೀಡುವುದು ಸರಿಕಾಣುವುದಿಲ್ಲ. ಹಾಗಾಗಿ ಮರು ಪರೀಕ್ಷೆ ಮಾಡುತ್ತೇವೆ, ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕಳೆದ ಬಾರಿ ಕೂಡ ಗೊಂದಲ ಆಗಿತ್ತು. ಈ ಬಾರಿ ಮರು ಪರೀಕ್ಷೆ ಮಾಡುವುದು ಸೂಕ್ತ ಎಂದು ನಿರ್ಧಾರ ಮಾಡಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.