ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನಾಲ್ವರ ಬಂಧನ: 25.5 ಕೋಟಿ ರೂ ಮೌಲ್ಯದ ಹೈಡ್ರೋಪೊನಿಕ್ ಗಾಂಜಾ ವಶ!
ಪ್ರಯಾಣಿಕರನ್ನು ತಪಾಸಣೆಗೆ ನಡೆಸಿದ ಅಧಿಕಾರಿಗಳು ಅವರ ಬ್ಯಾಗೇಜ್ ನಲ್ಲಿದ್ದ 18.43 ಕೋಟಿ ರೂ. ಮೌಲ್ಯದ 52.68 ಕೆ.ಜಿ ಹೈಡ್ರೋಪೊನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರು: ಕಸ್ಟಮ್ಸ್ ಅಧಿಕಾರಿಗಳು ಶನಿವಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆಸಿದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ನಾಲ್ವರನ್ನು ಬಂಧಿಸಿದ್ದು, 21.5 ಕೋಟಿ ರೂ. ಮೊತ್ತದ ಹೈಡ್ರೋಪೊನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ ಬ್ಯಾಂಕಾಕ್‌ನಿಂದ ಬಂದ ಮೂವರು ಪ್ರಯಾಣಿಕರನ್ನು ತಪಾಸಣೆಗೆ ನಡೆಸಿದ ಅಧಿಕಾರಿಗಳು ಅವರ ಬ್ಯಾಗೇಜ್ ನಲ್ಲಿದ್ದ 18.43 ಕೋಟಿ ರೂ. ಮೌಲ್ಯದ 52.68 ಕೆ.ಜಿ ಹೈಡ್ರೋಪೊನಿಕ್ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.
ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಬ್ಯಾಂಕಾಕ್‌ನಿಂದ ಆಗಮಿಸುತ್ತಿದ್ದ ಮತ್ತೊಬ್ಬ ಪ್ರಯಾಣಿಕನನ್ನು ತಡೆದು ತಪಾಸಣೆ ನಡೆಸಿದಾಗ ಆತನ ಬ್ಯಾಗೇಜ್ ನಿಂದ 3.15 ಕೋಟಿ ರೂ. ಮೌಲ್ಯದ 9 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಸದ್ಯ ಕಸ್ಟಮ್ಸ್ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿ ಎನ್‌ಡಿಪಿಎಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



