ರಾಜ್ಯ

ಇನ್ನೊವೇಶನ್, ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ: ಬೆಂಗಳೂರಿನಲ್ಲಿ ಭಾರತದ ಮೊಟ್ಟಮೊದಲ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರ ಆರಂಭ

ಕರ್ನಾಟಕ ಇನೋವೇಷನ್ ಮತ್ತು ಟೆಕ್ನಾಲಜಿ ಸೊಸೈಟಿ (KITS) ಹಾಗೂ SIA-ಇಂಡಿಯಾ ಸಹಯೋಗದಲ್ಲಿ ಸ್ಥಾಪಿಸಲಾದ ಈ ಕೇಂದ್ರವು ಸಂಶೋಧನೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನಗಳ ವಾಣಿಜ್ಯೀಕರಣದ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ.

ಇನ್ನೊವೇಶನ್, ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ: ಬೆಂಗಳೂರಿನಲ್ಲಿ ಭಾರತದ ಮೊಟ್ಟಮೊದಲ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರ ಆರಂಭ
ಬಾಹ್ಯಾಕಾಶ ತಂತ್ರಜ್ಞಾನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಉಪಕರಣಗಳನ್ನು ಪರಿಶೀಲಿಸಿದರು
Published On :

ಬೆಂಗಳೂರು: ಭಾರತದಲ್ಲಿ ಮೊಟ್ಟಮೊದಲ ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದ ‘ಸೆಂಟರ್ ಆಫ್ ಎಕ್ಸಲೆನ್ಸ್’ ನ್ನು ಕರ್ನಾಟಕದ ಬೆಂಗಳೂರಿನಲ್ಲಿ ಆರಂಭಿಸಲಾಯಿತು. ಇದು ದೇಶದ ಬಾಹ್ಯಾಕಾಶ ಆರ್ಥಿಕತೆಯಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಕರ್ನಾಟಕವನ್ನು ರಾಷ್ಟ್ರೀಯ ಬಾಹ್ಯಾಕಾಶ ನವೀನತೆ ಕೇಂದ್ರವಾಗಿ ಸ್ಥಾಪಿಸುವ ದಿಕ್ಕಿನಲ್ಲಿ ಮುಂದಾಗಿದೆ.

ಕರ್ನಾಟಕ ಇನೋವೇಷನ್ ಮತ್ತು ಟೆಕ್ನಾಲಜಿ ಸೊಸೈಟಿ (KITS) ಹಾಗೂ SIA-ಇಂಡಿಯಾ ಸಹಯೋಗದಲ್ಲಿ ಸ್ಥಾಪಿಸಲಾದ ಈ ಕೇಂದ್ರವು ಸಂಶೋಧನೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನಗಳ ವಾಣಿಜ್ಯೀಕರಣದ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ.

ಈ ಕೇಂದ್ರವನ್ನು ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರದ ಅಧಿಕಾರಿಗಳು, ವಿಜ್ಞಾನಿಗಳು ಮತ್ತು ಉದ್ಯಮ ಮುಖಂಡರ ಸಮ್ಮುಖದಲ್ಲಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕವು ತಂತ್ರಜ್ಞಾನ ಮತ್ತು ನವೀನತೆಯ ಕ್ಷೇತ್ರದಲ್ಲಿ ಸದಾ ಮುಂಚೂಣಿಯಲ್ಲಿದ್ದು, ಈ ಹೊಸ ಕೇಂದ್ರವು ನಾಯಕತ್ವವನ್ನು ಬಾಹ್ಯಾಕಾಶ ಕ್ಷೇತ್ರಕ್ಕೂ ವಿಸ್ತರಿಸಲಿದೆ ಎಂದು ಹೇಳಿದರು.

ಈ ಕೇಂದ್ರವು ಬಾಹ್ಯಾಕಾಶ ತಂತ್ರಜ್ಞಾನಗಳಲ್ಲಿ ಉನ್ನತ ಮಟ್ಟದ ಸಂಶೋಧನೆ ಮತ್ತು ನವೀನತೆ, ಕೈಗಾರಿಕಾ ಅವಶ್ಯಕತೆಗಳಿಗೆ ಹೊಂದಿಕೊಂಡ ತರಬೇತಿ, ಪ್ರತಿಭಾ ಅಭಿವೃದ್ಧಿ, ಸ್ಟಾರ್ಟ್‌ಅಪ್ ಇಂಕ್ಯೂಬೇಷನ್ ಮತ್ತು ಕೃಷಿ, ಹವಾಮಾನ, ವಿಪತ್ತು ನಿರ್ವಹಣೆ, ಸಂಪರ್ಕ ವ್ಯವಸ್ಥೆ, ಜೀವ ವಿಜ್ಞಾನಗಳು ಹಾಗೂ ರಾಷ್ಟ್ರೀಯ ಭದ್ರತೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಬಾಹ್ಯಾಕಾಶ ತಂತ್ರಜ್ಞಾನಗಳ ಬಳಕೆಯನ್ನು ವಿಸ್ತರಿಸುವುದಕ್ಕೆ ಗಮನಹರಿಸಲಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ‘ಸಮಾಜಮುಖಿ ಪರಿಣಾಮಕ್ಕಾಗಿ ಬಾಹ್ಯಾಕಾಶ ತಂತ್ರಜ್ಞಾನ’ ಎಂಬ ವಿಷಯದಡಿ ಉಪಗ್ರಹಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆಸಕ್ತಿ ವ್ಯಕ್ತಪಡಿಸಿದೆ. ಬೆಳೆಯುತ್ತಿರುವ ಬಾಹ್ಯಾಕಾಶ ಪರಿಸರ ವ್ಯವಸ್ಥೆಗೆ ಬೆಂಬಲ ನೀಡಲು ಸಾಮಾನ್ಯ ತಾಂತ್ರಿಕ ಸೌಲಭ್ಯಗಳ ಅಗತ್ಯವಿದೆ. ಉದ್ಯಮ ವಲಯದ ಹಿತಾಸಕ್ತಿಪಕ್ಷಗಳೊಂದಿಗೆ ಚರ್ಚೆಗಳು ನಡೆಯಲಿವೆ ಎಂದು ಹೇಳಿದ್ದಾರೆ.

ಈ ಕೇಂದ್ರವು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಷನ್, ಹೆಲೋಜನ್ ಕಾರ್ಪೊರೇಶನ್, ಅಸೋಸಿಯೇಷನ್ ಆಫ್ ಬಯೋಟೆಕ್ನಾಲಜಿ ಲೆಡ್ ಎಂಟರ್‌ಪ್ರೈಸಸ್ ಮತ್ತು ದಸ್ಸಾಲ್ಟ್ ಸಿಸ್ಟಮ್ಸ್ ಸಂಸ್ಥೆಗಳೊಂದಿಗೆ ತಂತ್ರಜ್ಞಾನ, ಬಾಹ್ಯಾಕಾಶ ಜೀವ ತಂತ್ರಜ್ಞಾನ, ಸ್ಟಾರ್ಟ್‌ಅಪ್ ಇಂಕ್ಯೂಬೇಷನ್ ಮತ್ತು ಉದ್ಯೋಗ ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ಸಹಕಾರ ಒಪ್ಪಂದಗಳಿಗೆ ಸಹಿ ಹಾಕಿದೆ.

ಭಾರತದ ವೇಗವಾಗಿ ಬೆಳೆಯುತ್ತಿರುವ ಬಾಹ್ಯಾಕಾಶ ಆರ್ಥಿಕತೆಯಲ್ಲಿ ನವೀನತೆ, ಸ್ಟಾರ್ಟ್‌ಅಪ್‌ಗಳು ಮತ್ತು ಹೊಸ ಅವಕಾಶಗಳನ್ನು ಉತ್ತೇಜಿಸಲು ಈ ಕೇಂದ್ರವು ಪ್ರಮುಖ ಪಾತ್ರ ವಹಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.