'ದೇಶದ ಆರ್ಥಿಕ ಸ್ಥಿತಿ ಬಲವಾಗಿದೆ ಎಂದು ಪ್ರಧಾನ ಮಂತ್ರಿ, ಹಣಕಾಸು ಸಚಿವರು ಹೇಳುತ್ತಾರೆ, ಹೀಗಿರುವಾಗ ಬೆಲೆ ಹೆಚ್ಚಿಸುವ ಅಗತ್ಯವೇನು?': ಡಾ ಜಿ ಪರಮೇಶ್ವರ್
ಈಗಾಗಲೇ ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ತತ್ತರಿಸಿ ಹೋಗಿದ್ದಾರೆ, ಜೀವನ ಕಷ್ಟವಾಗುತ್ತಿದೆ, ಅಂತಹ ಸಂದರ್ಭದಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚು ಮಾಡುವ ಅವಶ್ಯಕತೆಯಿರಲಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು: ದೇಶದ ಆರ್ಥಿಕ ಸ್ಥಿತಿ ಬಲವಾಗಿದೆ ಎಂದು ಪ್ರಧಾನ ಮಂತ್ರಿ, ಹಣಕಾಸು ಸಚಿವರನ್ನು ಒಳಗೊಂಡು ಅನೇಕ ನಾಯಕರು ಹೇಳುತ್ತಿರುವ ಸಂದರ್ಭದಲ್ಲಿ, ಈಗ ದರಗಳನ್ನು ಹೆಚ್ಚಿಸುವ ಅಗತ್ಯವೇನು? ಜನರ ಮೇಲೆ ಹೆಚ್ಚುವರಿ ದರ ಏರಿಕೆಯ ಭಾರ ಹಾಕುವುದು ಸರಿಯಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಎಲ್‌ಪಿಜಿ ದರ ಏರಿಕೆ ಕುರಿತು ಹೇಳಿದ್ದಾರೆ.
ಈಗಾಗಲೇ ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ತತ್ತರಿಸಿ ಹೋಗಿದ್ದಾರೆ, ಜೀವನ ಕಷ್ಟವಾಗುತ್ತಿದೆ, ಅಂತಹ ಸಂದರ್ಭದಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚು ಮಾಡುವ ಅವಶ್ಯಕತೆಯಿರಲಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇರಾನ್ ಯುದ್ಧ ಪ್ರಾರಂಭವಾದಾಗಿನಿಂದ ಬಹಳಷ್ಟು ತೊಂದರೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಈಗ ಬೆಲೆ ಹೆಚ್ಚಳ ಮಾಡಬಾರದಾಗಿತ್ತು. ಆದರೆ ದೇಶದ ಆರ್ಥಿಕತೆ ಉತ್ತಮವಾಗಿದೆ, ಹಣದುಬ್ಬರ ನಿಯಂತ್ರಿಸಲು, ಸಂಕಷ್ಟ ನಿಭಾಯಿಸುವ ಶಕ್ತಿಯಿದೆ, ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಪ್ರಧಾನ ಮಂತ್ರಿಗಳೂ ಹೇಳುತ್ತಾರೆ, ಕೇಂದ್ರ ಹಣಕಾಸು ಸಚಿವರು ಕೂಡ ಹೇಳುತ್ತಾರೆ. ಹೀಗಿರುವಾಗ ಇಂತಹ ಸಂದರ್ಭದಲ್ಲಿ ತೋರಿಸಬೇಕು ಎಂದರು.

ಖರ್ಗೆಯವರು ಹೇಳಿದ ಮೇಲೆ ಮುಗೀತು; ನಾಯಕತ್ವ ಬದಲಾವಣೆ ವದಂತಿಗೆ ಪೂರ್ಣವಿರಾಮ ಹೇಳಿದ್ದಾರೆ: ಡಾ ಜಿ ಪರಮೇಶ್ವರ್; Video
ತೈಲದ ದರ ಬ್ಯಾರಲ್ ಗೆ ದರ ಹೆಚ್ಚಳವಾಗಿದ್ದರೆ ಅದನ್ನು ತಡೆದುಕೊಳ್ಳುವ ಶಕ್ತಿ ತೋರಿಸಬೇಕು, ಅದನ್ನು ಬಿಟ್ಟು ಜನಸಮುದಾಯಕ್ಕೆ ಹೊರೆಯಾಗುವ ರೀತಿಯಲ್ಲಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡುವುದು ಸರಿಯಲ್ಲ ಎಂದರು.
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಲೆ ಹೆಚ್ಚಳವಾದಾಗ ದರ ಏರಿಕೆ ಮಾಡುವುದು ಅನಿವಾರ್ಯ ಎಂದು ನಾವು ಹೇಳುತ್ತಿದ್ದಾಗ ಬಿಜೆಪಿಯವರು ಟೀಕೆ ಮಾಡುತ್ತಿದ್ದರು. ಈಗ ಅವರೇನು ಮಾಡುತ್ತಿದ್ದಾರೆ ಎಂದು ಪರಮೇಶ್ವರ್ ಕೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


