ಹೊಸಪೇಟೆ ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; 33 ಹೊಸ ಕ್ರಸ್ಟ್‌ಗೇಟ್ ಅಳವಡಿಕೆ ವೀಕ್ಷಣೆ; Video
ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು ಹೊಸ ಗೇಟ್ ಅಳವಡಿಸಿದ ನಂತರ ಇದೇ ಮೊದಲ ಬಾರಿಗೆ ಅವರು ಡ್ಯಾಂಗೆ ಆಗಮಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯಕ್ಕೆ ಇಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದು ಹೊಸ ಗೇಟ್ ಅಳವಡಿಸಿದ ನಂತರ ಇದೇ ಮೊದಲ ಬಾರಿಗೆ ಅವರು ಡ್ಯಾಂಗೆ ಆಗಮಿಸಿದ್ದಾರೆ.
ಪ್ರಾಯೋಗಿಕ ಪರೀಕ್ಷೆ ತೋರಿಸಿದ ಟಿಬಿ ಡ್ಯಾಂ ಅಧಿಕಾರಿಗಳು ಜಲಾಶಯದ ಹೊಸ ಕ್ರಸ್ಟ್ ಗೇಟ್ ನಿರ್ಮಾಣ ಕಾಮಗಾರಿಯನ್ನು ಕೂಲಂಕಷವಾಗಿ ವೀಕ್ಷಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಟಿಬಿ ಡ್ಯಾಂ ಆಡಳಿತ ಮಂಡಳಿ ಅಧಿಕಾರಿಗಳು ಪ್ರಾಯೋಗಿಕ ಪರೀಕ್ಷೆಯನ್ನು ತೋರಿಸಿದರು.
ಎರಡು ವರ್ಷಗಳ ಹಿಂದೆ ಜಲಾಶಯದ 19ನೇ ನಂಬರಿನ ಕ್ರಸ್ಟ್ ಗೇಟ್ ಮುರಿದಿತ್ತು, ಈ ವೇಳೆ 19ನೇ ಕ್ರಸ್ಟ್ ಗೇಟ್ ನ್ನು ಮೇಲಕ್ಕೆ ಎತ್ತುವ ಮೂಲಕ ಗೇಟ್ ಕಾರ್ಯನಿರ್ವಹಣೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಯಿತು. ಯಶಸ್ವಿಯಾಗಿ ಪೂರ್ಣಗೊಂಡ ಟಿಬಿ ಡ್ಯಾಂ ಗೇಟ್ ಅಳವಡಿಕೆ ಕಾರ್ಯ ನಡೆದಿತ್ತು.
ಡಿ.ಕೆ. ಶಿವಕುಮಾರ್ ಅವರು ಯುದ್ಧೋಪಾದಿಯಲ್ಲಿ ಹೊಸ ಗೇಟ್ ಅಳವಡಿಸುವ ಭರವಸೆ ನೀಡಿದ್ದರು. ಎಂಜಿನಿಯರ್‌ಗಳ ನಿರಂತರ ಪರಿಶ್ರಮದಿಂದಾಗಿ ಈ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ.
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳ ಜೊತೆ ಸಚಿವರಾದ ಎನ್.ಎಸ್. ಬೋಸರಾಜು ಮತ್ತು ಶಿವರಾಜ್ ತಂಗಡಗಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


