ಸಾಮೂಹಿಕ ವಿವಾಹ ಕಾರ್ಯಕ್ರಮದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ: ಡಿಸಿಎಂ ಡಿ.ಕೆ ಶಿವಕುಮಾರ್ ಪಾರು
ಸಿಂಧನೂರು ಪಟ್ಟಣದಲ್ಲಿ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡಿದ್ದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು ಸಚಿವರನ್ನು ಕೂಡಲೇ ಅಲ್ಲಿಂದ ಹೊರಕರತರಲಾಯಿತು.

ರಾಯಚೂರು: ಸಿಂಧನೂರು ಪಟ್ಟಣದಲ್ಲಿ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿದೆ. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪಾಲ್ಗೊಂಡಿದ್ದ ವೇದಿಕೆ ಬಳಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದ್ದು ಸಚಿವರನ್ನು ಕೂಡಲೇ ಅಲ್ಲಿಂದ ಹೊರಕರತರಲಾಯಿತು.
ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕಾಗಿ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಈಶ್ವರ ಖಂಡ್ರೆ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ನವ ಜೋಡಿಗಳಿಗೆ ಶುಭಕೋರಿದ ಬಳಿಕ ವೇದಿಕೆ ಬಳಿ ಶಿವಕುಮಾರ್ ತೆರಳುತ್ತಿದ್ದ ವೇಳೆ ವೇದಿಕೆಯ ಮೆಟ್ಟಿಲುಗಳ ಬಳಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿತ್ತು. ತಕ್ಷಣ ಅಲರ್ಟ್ ಆದ ಪೊಲೀಸ್ ಸಿಬ್ಬಂದಿ ಶಿವಕುಮಾರ್ ಹಾಗೂ ಈಶ್ವರ ಖಂಡ್ರೆ ಅವರನ್ನು ಬೇರೆಡೆ ಕರೆದೊಯ್ದರು. ತಾಂತ್ರಿಕ ದೋಷದಿಂದಾಗಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಹೊಸಪೇಟೆ ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; 33 ಹೊಸ ಕ್ರಸ್ಟ್ಗೇಟ್ ಅಳವಡಿಕೆ ವೀಕ್ಷಣೆ; Video
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


