ರಾಜ್ಯ

ನನ್ನ ಹತ್ಯೆಯಾದರೆ ಶಾಸಕ ಬೈರತಿ ಬಸವರಾಜು ಹೊಣೆ: AAP ನಾಯಕಿ ಗಂಭೀರ ಆರೋಪ

ಬೈರತಿ ಬಸವರಾಜ್ ಬೆಂಬಲಿಗರು ತನ್ನ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಧ್ವಂಸಗೊಳಿಸಿದ್ದಲ್ಲದೆ, ತನಗೆ ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ವಿಜ್ಞಾನ ನಗರ ವಾರ್ಡ್ ಅಧ್ಯಕ್ಷೆ ಸತ್ಯವಾಣಿ ದೂರಿದ್ದಾರೆ.

ನನ್ನ ಹತ್ಯೆಯಾದರೆ ಶಾಸಕ ಬೈರತಿ ಬಸವರಾಜು ಹೊಣೆ: AAP ನಾಯಕಿ ಗಂಭೀರ ಆರೋಪ
ಬೈರತಿ ಬಸವರಾಜು
Published On :

ಬೆಂಗಳೂರು: ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆ ಎದುರಿಸುತ್ತಿರುವ ಕೆ.ಆರ್. ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರಿಗೆ ಈಗ ಮತ್ತೊಂದು ಹೊಸ ಸಂಕಷ್ಟ ಎದುರಾಗಿದೆ.

ನಗರದ ಕೆ.ಆರ್. ಪುರಂ ವಿಧಾನಸಭಾ ಕ್ಷೇತ್ರದ ವಿಜ್ಞಾನ ನಗರ ವಾರ್ಡಿನ ಆಮ್ ಆದ್ಮಿ ಪಕ್ಷದ ಅಧ್ಯಕ್ಷೆ ಸತ್ಯವಾಣಿ ರವರ ಮನೆ ಮುಂದೆ ಅವರ ಕಾರನ್ನು ಜಖಂಗೊಳಿಸಲಾಗಿದೆ. ಈ ಸಂಬಂಧ ಬಿಜೆಪಿ ಸ್ಥಳೀಯ ಮುಖಂಡರುಗಳ ವಿರುದ್ಧ ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಬೈರತಿ ಬಸವರಾಜ್ ಬೆಂಬಲಿಗರು ತನ್ನ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಧ್ವಂಸಗೊಳಿಸಿದ್ದಲ್ಲದೆ, ತನಗೆ ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ವಿಜ್ಞಾನ ನಗರ ವಾರ್ಡ್ ಅಧ್ಯಕ್ಷೆ ಸತ್ಯವಾಣಿ ದೂರಿದ್ದಾರೆ.

ಕಳೆದ ತಿಂಗಳು ಕೂಡ ಶಾಸಕರು ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವಂತಹ ಸುಮಾರು 50 ಬೃಹತ್ ಫ್ಲೆಕ್ಸ್ ಬ್ಯಾನರ್‌ಗಳನ್ನು ವಾರ್ಡ್‌ನಾದ್ಯಂತ ಹಾಕಿಸಿದ್ದರು ಎಂದು ಕಿಡಿಕಾರಿದ ಆಪ್ ನಾಯಕಿ, ಆರಂಭದಲ್ಲಿ ಈ ಬಗ್ಗೆ ದೂರು ನೀಡಲು ಹೋದಾಗ ಎಚ್‌ಎಎಲ್ ಪೊಲೀಸರು ಶಾಸಕರ ಒತ್ತಡಕ್ಕೆ ಮಣಿದು ದೂರು ಸ್ವೀಕರಿಸಲು ನಿರಾಕರಿಸಿದ್ದರು, ನಂತರ ಲೋಕಾಯುಕ್ತರ ಮೊರೆ ಹೋದ ಮೇಲೆ ಪ್ರಕರಣ ದಾಖಲಾಗಿತ್ತು ಎಂದು ದೂರಿದ್ದಾರೆ.

ಮುಂಬರುವ ಜಿಬಿಎ (GBA) ಚುನಾವಣೆಗಳಿಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿರುವ ಕಾರಣಕ್ಕಾಗಿಯೇ ತನ್ನ ಮೇಲೆ ಇಂತಹ ಹಲ್ಲೆ ನಡೆಯುತ್ತಿದೆ, ಹಾಗೂ ನನಗೆ ಬೆದರಿಕೆಗಳು ಬರುತ್ತಿವೆ ಎಂದು ಸತ್ಯವಾಣಿ ಆರೋಪಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಕೆರೆ ಒತ್ತುವರಿ ವಿರುದ್ಧ ಹೋರಾಟ ನಡೆಸುತ್ತಿರುವ ತನಗೆ ಏನಾದರೂ ತೊಂದರೆಯಾದರೆ ಅದಕ್ಕೆ ನೇರವಾಗಿ ಶಾಸಕ ಬೈರತಿ ಬಸವರಾಜ್ ಅವರೇ ಹೊಣೆ ಎಂದು ಅವರು ಎಚ್ಚರಿಸಿದ್ದಾರೆ.

ಪೊಲೀಸರು ಶಾಸಕರ ಪ್ರಭಾವಕ್ಕೆ ಒಳಗಾಗಿ ಕೆಲಸ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಮತ್ತು ಈ ಘಟನೆಯು ಕೆ.ಆರ್. ಪುರಂನಲ್ಲಿ ಮಹಿಳೆಯರು ಎಷ್ಟು ಅಸುರಕ್ಷಿತರಾಗಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.