ರಾಜ್ಯ

ರಾಜ್ಯಾದ್ಯಂತ 'ಪ್ಯಾಲಿಯೇಟಿವ್ ಕೇರ್ ಸೆಂಟರ್' ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್!

ಪ್ಯಾಲಿಯೇಟಿವ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದಿಲ್ಲ. ರೋಗಿಗಳು ಚಿಕಿತ್ಸೆಗೆ ಸ್ಪಂದಿಸದೇ ಇರುವ ಹಂತದಲ್ಲಿ, ಅಸಾಧಾರಣ ನೋವು, ಮಾನಸಿಕ ಒತ್ತಡದಿಂದ ಬಳಲುವ ರೋಗಿಗಳ ಮತ್ತು ಅಂತಹ ರೋಗಿಗಳ ಆರೈಕೆ ಮಾಡುತ್ತಿರುವ ಕುಟುಂಬ ವರ್ಗದವರಿಗೆ ಇದು ವರದಾನವಾಗಲಿದೆ.

ರಾಜ್ಯಾದ್ಯಂತ 'ಪ್ಯಾಲಿಯೇಟಿವ್ ಕೇರ್ ಸೆಂಟರ್' ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್!
ದಿನೇಶ್ ಗುಂಡೂರಾವ್
Published On :

ಬೆಂಗಳೂರು: ನಗರದ ಮಲ್ಲೇಶ್ವರಂ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಸರನಂ ಇಂಡಿಯಾ ಸಂಸ್ಥೆಯ ಸಹಯೋಗದೊಂದಿಗೆ ಪ್ಯಾಲಿಯೇಟಿವ್ ಕೇರ್ ಯುನಿಟ್ ನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಉದ್ಘಾಟಿಸಿದರು.

ಪ್ಯಾಲಿಯೇಟಿವ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದಿಲ್ಲ. ರೋಗಿಗಳು ಚಿಕಿತ್ಸೆಗೆ ಸ್ಪಂದಿಸದೇ ಇರುವ ಹಂತದಲ್ಲಿ, ಅಸಾಧಾರಣ ನೋವು, ಮಾನಸಿಕ ಒತ್ತಡದಿಂದ ಬಳಲುವ ರೋಗಿಗಳ ಮತ್ತು ಅಂತಹ ರೋಗಿಗಳ ಆರೈಕೆ ಮಾಡುತ್ತಿರುವ ಕುಟುಂಬ ವರ್ಗದವರಿಗೆ ಇದು ವರದಾನವಾಗಲಿದೆ.

ಈ ವೇಳೆ ಮಾತನಾಡಿದ ದಿನೇಶ್ ಗುಂಡೂರಾವ್, ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಪ್ರಾಥಮಿಕವಾಗಿ ಐದು ಬೆಡ್ ಗಳ ಒಂದು ವಾರ್ಡ್ ನಿರ್ಮಾಣ ಮಾಡಿದ್ದೇವೆ. ಮಾರಣಾಂತಿಕ ಅಥವಾ ತೀವ್ರವಾದ ಕಾಯಿಲೆಗಳಿಂದ ಬಳಲುತ್ತ, ಅಂತಿಮ ಹಂತದಲ್ಲಿರುವ ರೋಗಿಗಳಿಗೆ ಇದು ವಿಶೇಷ ಯೂನಿಟ್ ಆಗಿದೆ. ಕ್ಯಾನ್ಸರ್, ಕಿಡ್ನಿ ವೈಫಲ್ಯ ಸೇರಿದಂತೆ ಇತರ ರೋಗಿಗಳ ಆರೈಕೆಗೆ ಈ ವಾರ್ಡ್ ಸಹಾಯಕವಾಗಿದೆ ಎಂದರು.

ತೀವ್ರವಾದ ನೋವು, ಉಸಿರಾಟ ತೊಂದರೆ, ನರ ಸಂಬಂಧಿ ಕಾಯಿಲೆಯಿಂದ ಬಳಲುವವರು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವವರಿಗೆ ಈ ಕೇಂದ್ರ ಅನುಕೂಲ. ರೋಗವನ್ನು ಗುಣಪಡಿಸುವುದಕ್ಕೆ ಸಾಧ್ಯವಿಲ್ಲದ ಹಂತದಲ್ಲಿ ರೋಗಿಯ ದೈಹಿಕ ನೋವು & ಮಾನಸಿಕ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದೊಂದಿಗೆ ಇದನ್ನು ಮಾಡಿದ್ದೇವೆ. ರೋಗಿಗಳ ಕುಟುಂಬದವರಿಗೂ ಸೂಕ್ತ ತರಬೇತಿ ನೀಡಲಾಗುತ್ತದೆ ಎಂದು ಹೇಳಿದರು.

ಪ್ಯಾಲಿಯೇಟಿವ್ ಕೇರ್ ಕೇಂದ್ರವನ್ನು ರಾಜ್ಯಾದ್ಯಂತ ಪ್ರಾರಂಭಿಸುವ ಗುರಿ ಹೊಂದಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ನಾಲ್ಕೈದು ಕಡೆ ಪ್ರಾರಂಭಿಸಿದ್ದೇವೆ. ಈ ಯುನಿಟ್ ನಲ್ಲಿ ತಜ್ಞರ ತಂಡದಿಂದ ಹೊರರೋಗಿ ವಿಭಾಗ, ಡೇ ಕೇರ್ ವಿಭಾಗ, ಸುಸಜ್ಜಿತ ಒಳ ರೋಗಿ ವಿಭಾಗ ಮತ್ತು ಆಸ್ಪತ್ರೆಯಿಂದ 5-8 ಕಿಲೋ ವ್ಯಾಪ್ತಿಯಲ್ಲಿ ಮನೆಗೆ ತೆರಳಿ ಆರೈಕೆ ಮಾಡುವ ಮತ್ತು ಆರೈಕೆಗೆ ಪೂರಕ ತರಬೇತಿ ನೀಡುವ ಮೊಬೈಲ್ ಯುನಿಟ್ ಸಹ ಇರಲಿದೆ ಎಂದು ತಿಳಿಸಿದರು.

ಮಾನವೀಯತೆ ದೃಷ್ಟಿಯಿಂದ ಈ ಸೇವೆ ನೀಡಲಾಗುತ್ತಿದ್ದು ಸರ್ವಜನಿಕರು ಇದರ ಉಪಯೋಗ ಪಡೆಯಬೇಕು ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.