ರಾಜ್ಯ

ಮತ ಪತ್ರ ತಿದ್ದಿದ ಆರೋಪ: ಶಾಸಕ ಜೀವರಾಜ್ ವಿರುದ್ಧದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ!

ಜೀವರಾಜ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ರಜಾಕಾಲದ ಏಕ ಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಮತ ಪತ್ರ ತಿದ್ದಿದ ಆರೋಪ: ಶಾಸಕ ಜೀವರಾಜ್ ವಿರುದ್ಧದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ!
ಶಾಸಕ ಜೀವರಾಜ್
Published On :

ಚಿಕ್ಕಮಗಳೂರು : ಮರು ಮತ ಎಣಿಕೆ ವೇಳೆ ಮತಪತ್ರಗಳನ್ನು ತಿದ್ದಿದ ಆರೋಪಕ್ಕೆ ಸಂಬಂಧಿಸಿದಂತೆ ಶೃಂಗೇರಿ ಕ್ಷೇತ್ರದ ಶಾಸಕ ಡಿ.ಎನ್ ಜೀವರಾಜ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಕ್ಕೆ ಉಚ್ಚ ನ್ಯಾಯಾಲಯ ಮಧ್ಯಂತರ ತಡೆ ನೀಡಿದೆ. ಅಲ್ಲದೇ, ವಿಚಾರಣೆಯನ್ನು ಈ ತಿಂಗಳ 7 ಕ್ಕೆ ಮುಂದೂಡಿದೆ.

ಈ ಕುರಿತಂತೆ ಜೀವರಾಜ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ರಜಾಕಾಲದ ಏಕ ಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಜೀವರಾಜ್ ಪರ ಹಾಜರಾಗಿದ್ದ ಪದಾಂಕಿತ ಹಿರಿಯ ವಕೀಲ ಅಶೋಕ ಹಾರನಹಳ್ಳಿ ಅವರ ವಾದ ಆಲಿಸಿದ ನ್ಯಾಯಪೀಠ, ಗೊಂದಲಗಳಿದ್ದರೆ ಚುನಾವಣಾ ತಕರಾರು ಅರ್ಜಿಯಲ್ಲೇ ಉಲ್ಲೇಖಿಸಬೇಕಿತ್ತು. ರಾಜಕೀಯ ಒತ್ತಡದಿಂದ ದೂರು ದಾಖಲಿಸುವುದು ಸರಿಯಲ್ಲ. ಹೀಗಾದರೆ ಯಾವ ಅಧಿಕಾರಿಯೂ ಸ್ವತಂತ್ರವಾಗಿ ಕೆಲಸ ಮಾಡಲಾಗುವುದಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತು.

ಏನಿದು ಪ್ರಕರಣ: 2023 ರಲ್ಲಿ ವಿಧಾನ ಸಭೆ ಚುನಾವಣೆ ಮುಗಿದ ಬಳಿಕ ಜೀವರಾಜ್ ಹಾಗು ಅಧಿಕಾರಿಗಳು ಬ್ಯಾಲೆಟ್ ಮತ ಪತ್ರಗಳನ್ನು ತಿದ್ದಿದ್ದಾರೆ. ಇದರಿಂದ ಮರು ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ.ಡಿ ರಾಜೇಗೌಡರೀಗೆ ಸೋಲಾಗಿದೆ ಈ ಬಗ್ಗೆ ತನಿಖೆ ನಡೆಸಬೇಕು ಎಂದು ರಾಜೇಗೌಡರ ಪರ ಕೌಟಿಂಗ್ ಏಜೆಂಟ್ ಸುಧೀರ್ ಕುಮಾರ್ ಮುರೋಳಿ ಎಂಬುವವರು 2026ರ ಮೇ 3 ರಂದು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರಿನ ಹಿನ್ನಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ಜೀವರಾಜ್ ಹಾಗು ಈ ಹಿಂದಿನ ಇನ್ನಿಬ್ಬರು ಚುನಾವಣಾ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.