ರಾಜ್ಯ

El Nino ಆತಂಕ; ಪರಿಸ್ಥಿತಿ ಎದುರಿಸಲು ಈಗಲೇ ಸಿದ್ಧತೆ ಆರಂಭಿಸಿ; ಅಧಿಕಾರಿಗಳಿಗೆ ಸರ್ಕಾರ ಸೂಚನೆ

ರಾಜ್ಯದ 18 ವಿಭಾಗಗಳ ಅಧಿಕಾರಿಗಳಿಗೆ ಕೆರೆ, ಕಟ್ಟೆ, ಜಲಾಶಯಗಳು ಹಾಗೂ ಇತರೆ ನೀರು ಸಂಗ್ರಹಣೆ ಪ್ರದೇಶಗಳಲ್ಲಿ ಯಾವುದೇ ರೀತಿಯ ಸೋರಿಕೆ ಆಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

El Nino ಆತಂಕ; ಪರಿಸ್ಥಿತಿ ಎದುರಿಸಲು ಈಗಲೇ ಸಿದ್ಧತೆ ಆರಂಭಿಸಿ; ಅಧಿಕಾರಿಗಳಿಗೆ ಸರ್ಕಾರ ಸೂಚನೆ
ಸಚಿವ ಎನ್ಎಸ್ ಬೋಸರಾಜು
Published On :

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಬಹುದಾದ ಎಲ್ ನಿನೋ ಹವಾಮಾನ ಪರಿಣಾಮಗಳನ್ನು ಎದುರಿಸಲು ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವ ಎನ್.ಎಸ್. ಬೋಸರಾಜು ಅವರು ಅಧಿಕಾರಿಗಳಿಗೆ ಬುಧವಾರ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಸಚಿವರು, ಜಲಭದ್ರತೆ ಮತ್ತು ಬರ ನಿರ್ವಹಣೆ ಕುರಿತಾಗಿ ಅಧಿಕಾರಿಗಳಿಗೆ ಮಹತ್ವದ ನಿರ್ದೇಶನಗಳನ್ನು ನೀಡಿದರು.

ರಾಜ್ಯದ 18 ವಿಭಾಗಗಳ ಅಧಿಕಾರಿಗಳಿಗೆ ಕೆರೆ, ಕಟ್ಟೆ, ಜಲಾಶಯಗಳು ಹಾಗೂ ಇತರೆ ನೀರು ಸಂಗ್ರಹಣೆ ಪ್ರದೇಶಗಳಲ್ಲಿ ಯಾವುದೇ ರೀತಿಯ ಸೋರಿಕೆ ಆಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮುಂದಿನ ಕೆಲವು ತಿಂಗಳಲ್ಲಿ ಎಲ್ ನಿನೋ ಪರಿಣಾಮ ಎದುರಾಗುವ ಸಾಧ್ಯತೆ ಇದೆ. ಅದನ್ನು ಎದುರಿಸಲು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಕೆರೆ, ಅಣೆಕಟ್ಟು ಮತ್ತು ಜಲಾಶಯಗಳಿಂದ ನೀರು ಸೋರಿಕೆಯಾಗದಂತೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ (IISc) ವಿಜ್ಞಾನಿಗಳು, ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕೆ ಕೇಂದ್ರ (KSRSAC), ಕರ್ನಾಟಕ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರ (KSNDMC), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ತಜ್ಞರು ಹಾಗೂ ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್‌ಗಳು ಭಾಗವಹಿಸಿದ್ದರು.

ಸಭೆಯಲ್ಲಿ ತಜ್ಞರು ಭೂಗರ್ಭ ಜಲ ಮರುಪೂರಣ ಯೋಜನೆಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು. ಜೊತೆಗೆ ದೀರ್ಘಕಾಲಿಕ ಜಲ ಸಂರಕ್ಷಣಾ ಕ್ರಮಗಳು ಮತ್ತು ಮಳೆನೀರು ಸಂಗ್ರಹಣೆ ಕುರಿತು ರಾಜ್ಯವ್ಯಾಪಿ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.

ರಾಜ್ಯದಲ್ಲಿ ನೀರಿನ ಒತ್ತಡ ಉಂಟಾಗದಂತೆ ಮಳೆನೀರು ಸಂಗ್ರಹಣೆ ಕಡ್ಡಾಯಗೊಳಿಸುವುದು, ಭೂಗರ್ಭ ಜಲಮಟ್ಟ ಹೆಚ್ಚಿಸುವುದು ಮತ್ತು ಲಭ್ಯವಿರುವ ನೀರಿನ ಸಂಪನ್ಮೂಲಗಳನ್ನು ಸಮರ್ಥವಾಗಿ ಬಳಸುವುದು ಮುಖ್ಯ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.