ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ; ಕಾರು ಪಲ್ಟಿಯಾಗಿ ತಂದೆ, ಮಗ ಸಾವು; ಮಗಳಿಗೆ ಗಾಯ

ಮೃತರನ್ನು ಕಿರಣ್(40) ಮತ್ತು ಅವರ ಮಗ ಕಿಶೋರ್(15) ಎಂದು ಗುರುತಿಸಲಾಗಿದೆ. ಕಿರಣ್ ಅವರ ಪುತ್ರಿ ಕೀರ್ತನಾ 14) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ; ಕಾರು ಪಲ್ಟಿಯಾಗಿ ತಂದೆ, ಮಗ ಸಾವು; ಮಗಳಿಗೆ ಗಾಯ
ಸಾಂದರ್ಭಿಕ ಚಿತ್ರ
Published On :

ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಶನಿವಾರ ಭೀಕರ ಅಪಘಾತ ಸಂಭವಿಸಿದ್ದು, ಕಾರು ಪಲ್ಟಿಯಾಗಿ ತಂದೆ ಮತ್ತು ಮಗ ಸ್ಥಳದಲ್ಲೇ ಮೃತಪಟ್ಟಿದ್ದು, ಹದಿಹರೆಯದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮಂಡ್ಯ ಜಿಲ್ಲೆಯ ಕೋಣನಹಳ್ಳಿ ಬಳಿಯ ಸೇತುವೆಯ ಮೇಲೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಕಿರಣ್(40) ಮತ್ತು ಅವರ ಮಗ ಕಿಶೋರ್(15) ಎಂದು ಗುರುತಿಸಲಾಗಿದೆ. ಕಿರಣ್ ಅವರ ಪುತ್ರಿ ಕೀರ್ತನಾ 14) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪೊಲೀಸರ ಪ್ರಕಾರ, ಈ ಕುಟುಂಬ ಮೈಸೂರಿನಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ತಮ್ಮ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.

ಮೃತರು ಮಂಡ್ಯ ತಾಲ್ಲೂಕಿನ ಕಚಿಗೆರೆ ಗ್ರಾಮದ ನಿವಾಸಿಗಳಾಗಿದ್ದು, ಗಾಯಗೊಂಡ ಬಾಲಕಿ ಮತ್ತು ಮೃತರ ಶವಗಳನ್ನು ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆ(MIMS)ಗೆ ರವಾನಿಸಲಾಗಿದೆ.

ಮಂಡ್ಯ ಕೇಂದ್ರ ಪೊಲೀಸ್ ಠಾಣೆಯ ಅಧಿಕಾರಿಗಳು ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.