ಬೆಂಗಳೂರು: ಹೊಟೇಲ್ ನಲ್ಲಿ ಬೆಂಕಿ, ಓರ್ವ ಸಿಬ್ಬಂದಿ ಸಾವು, ನಾಲ್ವರಿಗೆ ಗಾಯ
ನಾಗರಬಾವಿಯ ರಿಂಗ್ ರೋಡ್ ಬಳಿಯ ಸರ್ವೀಸ್ ರೋಡ್‌ನಲ್ಲಿರುವ ಶಾಸಗಿ ಹೋಟೆಲ್ ನಲ್ಲಿ ನಿನ್ನೆ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಬೆಂಗಳೂರು: ನಗರದ ನಾಗರಬಾವಿಯ ರಿಂಗ್ ರೋಡ್ ಬಳಿಯ ಸರ್ವೀಸ್ ರಸ್ತೆಯಲ್ಲಿರುವ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಸಿ ಓರ್ವ ಸಿಬ್ಬಂದಿ ಮೃತಪಟ್ಟು, 4 ಜನ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ತಡರಾತ್ರಿ ಕಾಣಿಸಿಕೊಂಡ ಬೆಂಕಿ
ನಾಗರಬಾವಿಯ ರಿಂಗ್ ರೋಡ್ ಬಳಿಯ ಸರ್ವೀಸ್ ರೋಡ್‌ನಲ್ಲಿರುವ ಶಾಸಗಿ ಹೋಟೆಲ್ ನಲ್ಲಿ ನಿನ್ನೆ ತಡರಾತ್ರಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಅಲ್ಲೇ ಕೆಲಸ ಮಾಡುತ್ತಿದ್ದ 8 ಮಂದಿ ಸಿಬ್ಬಂದಿಗಳು ವಾಸವಿದ್ದ ಹೊಟೇಲ್ ಕಟ್ಟಡದ ಮೇಲಿನ ಮಹಡಿಗೂ ಬೆಂಕಿ ಹಬ್ಬಿದ್ದು, ಇದರಿಂದ ಪಾರಾಗಲು ಅಲ್ಲಿಂದ ಕೆಳಗೆ ಇಳಿಯಲು ಸಿಬ್ಬಂದಿ ಪ್ರಯತ್ನ ನಡೆಸಿದ್ದಾರೆ. ಅಷ್ಟರಲ್ಲಿ ಬೆಂಕಿ ಮಹಡಿಯಲ್ಲಿ ಆವರಿಸಿಕೊಂಡಿದ್ದು, ದಟ್ಟ ಹೊಗೆಯಿಂದಾಗಿ ಐವರು ಗಂಭೀರವಾಗಿ ಗಾಯಗೊಂಡಿದ್ದು, 3 ಜನ ಪಾರಾಗಿದ್ದಾರೆ.
ಅಗ್ನಿ ಅವಘಡಕ್ಕೆ ಓರ್ವ ಸಿಬ್ಬಂದಿ ಬಲಿ
ಘಟನೆ ತಿಳಿದ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದು, ಭೀಮಾ, ಶಿವಾನಂದ, ಸತೀಶ್, ರಾಜಕುಮಾರ್ ಸೇರಿದಂತೆ ಐವರು ಗಾಯಾಳುಗಳನ್ನು ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ 45 ವರ್ಷದ ರಾಜಕುಮಾರ್ ಎಂಬಾತ ಮೃತಪಟ್ಟಿದ್ದಾರೆ. ಉಳಿದ 4 ಜನ ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ
ಪ್ರಾಥಮಿಕವಾಗಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಅಪಘಾತದ ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



