ರಾಜ್ಯ

ಬೆಂಗಳೂರು: ವೈದ್ಯ ಸಾವು ಬೆನ್ನಲ್ಲೇ ನರ್ಸ್ ಆತ್ಮಹತ್ಯೆ; ಕಾರಣ..?

ಎರಡು ದಿನಗಳ ಹಿಂದೆಯಷ್ಟೇ ಇವರು ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ವೈದ್ಯ ಡಾ. ಚೇತನ್ ಟೆಂಕರ್ ಅವರು ಕೂಡ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ನರ್ಸ್ ಆತ್ಮಹತ್ಯೆಗೆ ಶರಣಾಗಿರುವ ಅನುಮಾನಗಳು ಹೆಚ್ಚಾಗುವಂತೆ ಮಾಡಿದೆ.

ಬೆಂಗಳೂರು: ವೈದ್ಯ ಸಾವು ಬೆನ್ನಲ್ಲೇ ನರ್ಸ್ ಆತ್ಮಹತ್ಯೆ; ಕಾರಣ..?
ಆತ್ಮಹತ್ಯೆಗೆ ಶರಣಾದ ನರ್ಸ್
Published On :

ಬೆಂಗಳೂರು: ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ಆತಂಕ ಹುಟ್ಟಿಸುವ ಘಟನೆ ನಡೆದಿದೆ. ವೈದ್ಯ ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳಲ್ಲೇ ಅದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೂಡ ನೇಣಿಗೆ ಶರಣಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ನವೋದಯ ಆಸ್ಪತ್ರೆಯಲ್ಲಿ ನರ್ಸ್ (Nurse) ಆಗಿ ಕೆಲಸ ಮಾಡುತ್ತಿದ್ದ ಸರಸ್ವತಿ (45) ಎಂಬುವವರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎರಡು ದಿನಗಳ ಹಿಂದೆಯಷ್ಟೇ ಇವರು ಕೆಲಸ ಮಾಡುತ್ತಿದ್ದ ಆಸ್ಪತ್ರೆಯ ವೈದ್ಯ ಡಾ. ಚೇತನ್ ಟೆಂಕರ್ ಅವರು ಕೂಡ ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ನರ್ಸ್ ಆತ್ಮಹತ್ಯೆಗೆ ಶರಣಾಗಿರುವ ಅನುಮಾನಗಳು ಹೆಚ್ಚಾಗುವಂತೆ ಮಾಡಿದೆ.

ಘಟನೆ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಎರಡೂ ಘಟನೆಗಳ ನಡುವೆ ಯಾವುದೇ ಸಂಬಂಧ ಇದೆಯೇ ಎಂಬುದನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಎರಡು ಘಟನೆಗಳ ಕುರಿತು ಕನಕಪುರ ಟೌನ್ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಎರಡೂ ಆತ್ಮಹತ್ಯೆ ಪ್ರಕರಣಗಳ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಘಟನೆಗಳು ಪರಸ್ಪರ ಸಂಬಂಧ ಹೊಂದಿದವೆಯೇ ಎಂಬುದೂ ಸ್ಪಷ್ಟವಾಗಿಲ್ಲ. ಮೃತರ ಕುಟುಂಬ ಸದಸ್ಯರನ್ನು ವಿಚಾರಣೆ ನಡೆಸಲಾಗುವುದು” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನೀವು ಅಥವಾ ನಿಮ್ಮ ಪರಿಚಯದ ಯಾರಾದರೂ ಮಾನಸಿಕ ಒತ್ತಡ, ಖಿನ್ನತೆ ಅಥವಾ ಆತ್ಮಹತ್ಯೆ ಚಿಂತನೆಗಳಿಂದ ಬಳಲುತ್ತಿದ್ದರೆ, ದಯವಿಟ್ಟು ಅದನ್ನು ನಿರ್ಲಕ್ಷಿಸಬೇಡಿ. ತಕ್ಷಣ ಕುಟುಂಬದವರು, ಸ್ನೇಹಿತರು ಅಥವಾ ಮಾನಸಿಕ ಆರೋಗ್ಯ ತಜ್ಞರ ನೆರವು ಪಡೆಯಿರಿ. ತುರ್ತು ಸಹಾಯಕ್ಕಾಗಿ 24x7 ಟೆಲಿ-ಮನಸ್ ಸಹಾಯವಾಣಿ 14416 ಅಥವಾ 1-800-891-4416 ಗೆ ಕರೆ ಮಾಡಬಹುದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.