ಬೆಂಗಳೂರಿನಲ್ಲಿ ದಾರುಣ ದುರಂತ: ಗೇಟ್ ಕುಸಿದುಬಿದ್ದು 5 ವರ್ಷದ ಬಾಲಕಿ ಸಾವು..!
ಘಟನೆಯಲ್ಲಿ ಮತ್ತೊಬ್ಬ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಕಾಂಪೌಂಡ್ ಗೋಡೆ ಮತ್ತು ಅದಕ್ಕೆ ಜೋಡಿಸಲಾದ ಕಬ್ಬಿಣದ ಗೇಟ್ ಕುಸಿದು ಬಿದ್ದು 5 ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆಯೊಂದು ನಗರದ ಚಿಕ್ಕಬಾಣಾವರದ ದ್ವಾರಕನಗರದಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಮತ್ತೊಬ್ಬ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
ಮೃತ ಬಾಲಕಿಯನ್ನು ಗೌಸಿಯಾ (5) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಸುಮಾರು 5.30ರ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಮನೆಯ ಮುಂದೆ ಆಟವಾಡುತ್ತಿದ್ದ ಮಕ್ಕಳ ಮೇಲೆ ಗೇಟ್ ಬಿದ್ದಿದ್ದು, ಘೌಸಿಯಾ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಸುಮಯ ಎಂಬ ಇನ್ನೊಬ್ಬ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಇಬ್ಬರು ಮಕ್ಕಳು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮೃತ ಬಾಲಕಿ ಗೌಸಿಯಾ ಹಾಗೂ ಗಾಯಗೊಂಡ ಸುಮಯ ಸಂಬಂಧಿಕರಾಗಿದ್ದಾರೆ. ದ್ವಾರಕಾನಗರದಲ್ಲಿರುವ ಮನೆ ರವಿಶಂಕರ್ ಅವರಿಗೆ ಸೇರಿದ್ದಾಗಿದ್ದು, ಕಳೆದ 5 ತಿಂಗಳ ಹಿಂದೆಯಷ್ಟೇ ಬಾಡಿಗೆ ಮನೆಗೆ ಗೌಸಿಯಾ ಪೋಷಕರು ಬಂದಿದ್ದರು. ದಂಪತಿಗಳು ಬಸ್ ನಿಲ್ದಾಣದ ಬಳಿ ಹಣ್ಣು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು ಎನ್ನಲಾಗಿದೆ.
ಘಟನೆ ಬಳಿಕ ಚಿಕ್ಕಬಾಣಾವರಪ ಪೊಲೀಸ್ ಠಾಣೆ ಪೊಲೀಸರು ಮನೆ ಮಾಲೀಕ ರವಿಶಂಕರ್ ಅವರನ್ನು ವಿಚಾರಣೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



