ಬೆಂಗಳೂರಿನಲ್ಲಿ ಮನಕಲಕುವ ಘಟನೆ: ಶೆಡ್’ಗೆ ಬೆಂಕಿ ತಗುಲಿ ಇಬ್ಬರು ಮಕ್ಕಳು ಸಜೀವ ದಹನ!
ನಾರಾಯಣಪುರದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಜೀವನ ದಹನವಾಗಿರುವ ಘಟನೆ ನಡೆದಿದೆ. ಕೂಲಿ ಕೆಲಸಕ್ಕಾಗಿ ನಗರಕ್ಕೆ ಬಂದಿದ್ದ ಕುಟುಂಬವೊಂದು ನಾರಾಯಣಪುರದಲ್ಲಿ ಶೆಡ್ ಹಾಕಿಕೊಂಡು ವಾಸವಿತ್ತು.

ಬೆಂಗಳೂರು: ನಾರಾಯಣಪುರದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಬ್ಬರು ಮಕ್ಕಳು ಜೀವನ ದಹನವಾಗಿರುವ ಘಟನೆ ನಡೆದಿದೆ. ಕೂಲಿ ಕೆಲಸಕ್ಕಾಗಿ ನಗರಕ್ಕೆ ಬಂದಿದ್ದ ಕುಟುಂಬವೊಂದು ನಾರಾಯಣಪುರದಲ್ಲಿ ಶೆಡ್ ಹಾಕಿಕೊಂಡು ವಾಸವಿತ್ತು. ಅಗ್ನಿ ಅವಘಡದಲ್ಲಿ ಮಕ್ಕಳಾದ 5 ವರ್ಷದ ಅರ್ಜುನ ಹಾಗೂ 3 ವರ್ಷದ ಆಶಾ ಮೃತಪಟ್ಟಿವೆ.
ಕೆಲಸಕ್ಕಾಗಿ ಪೋಷಕರು ಮಕ್ಕಳನ್ನು ಅಜ್ಜಿಯ ಬಳಿ ಬಿಟ್ಟು ಹೋಗಿದ್ದರು. ಇನ್ನು ಅಜ್ಜಿ ಮಕ್ಕಳನ್ನು ಶೆಡ್‌ನಲ್ಲಿ ಬಿಟ್ಟು ಸ್ವಲ್ಪ ದೂರ ಹೊರಗಡೆ ಹೋಗಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಶೆಡ್‌ಗೆ ಬೆಂಕಿ ಹೊತ್ತಿಕೊಂಡಿದೆ. ಮಕ್ಕಳ ಕಿರುಚಾಟ ಕೇಳಿ ಸ್ಥಳೀಯರು ಓಡಿ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಆದರೆ ದುರಾದೃಷ್ಟವಶಾತ್ ಮಕ್ಕಳು ಮೃತಪಟ್ಟಿದ್ದವು.
ಘಟನಾ ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



