ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕೊನೆಗೂ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ; ಜುಲೈ 1 ರಿಂದ ಜಾರಿ
ರಾಜ್ಯ ಸರ್ಕಾರ ವೇತನ ಹೆಚ್ಚಳದ ಬೆನ್ನಲ್ಲೇ, ನೌಕರರಿಗೆ ಪಾವತಿಸಬೇಕಿದ್ದ ಹಳೆಯ ವೇತನ ಹಿಂಬಾಕಿಯ ಮೊದಲ ಕಂತಿನ ಹಣವನ್ನು ಸಹ ಬಿಡುಗಡೆ ಮಾಡಿದೆ.

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಮಂಗಳವಾರ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ನೌಕರರ ವೇತನ ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ, ಸಾರಿಗೆ ನೌಕರರ ವೇತನವನ್ನು 2025 ಮಾರ್ಚ್ 31ರ ಮೂಲ ವೇತನದ ಮೇಲೆ ಶೇಕಡಾ 12.5 ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಹೊಸ ವೇತನವು 2026 ಜುಲೈ 1ರಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ.
ಶೇ.25 ರಷ್ಟು ವೇತನ ಪರಿಷ್ಕರಣೆಗೆ ಸಾರಿಗೆ ನೌಕರರ ಸಂಘಟನೆಗಳು ಒತ್ತಾಯಿಸಿದ್ದವು. ವೇತನ ಪರಿಷ್ಕರಣೆ ಮಾಡದಿದ್ದರೆ ಮುಷ್ಕರ ಮಾಡಲು ನಿರ್ಧರಿಸಿದ್ದವು. ಸದ್ಯ ಸಾರಿಗೆ ಇಲಾಖೆ ಶೇ.12.5 ರಷ್ಟು ವೇತನ ಪರಿಷ್ಕರಿಸಿದೆ. ಆದರೆ, ಇದಕ್ಕೆ ಸಾರಿಗೆ ನೌಕರರ ಸಂಘಟನೆಗಳು ಒಪ್ಪಿಗೆ ಸೂಚಿಸಿಲ್ಲ.
ಹಿಂಬಾಕಿ ಪಾವತಿಗೆ 450 ಕೋಟಿ ರೂ. ಬಿಡುಗಡೆ
ರಾಜ್ಯ ಸರ್ಕಾರ ವೇತನ ಹೆಚ್ಚಳದ ಬೆನ್ನಲ್ಲೇ, ನೌಕರರಿಗೆ ಪಾವತಿಸಬೇಕಿದ್ದ ಹಳೆಯ ವೇತನ ಹಿಂಬಾಕಿಯ ಮೊದಲ ಕಂತಿನ ಹಣವನ್ನು ಸಹ ಬಿಡುಗಡೆ ಮಾಡಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಎನ್ಡಬ್ಲ್ಯೂಕೆಆರ್ಟಿಸಿ) ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕೆಕೆಆರ್ಟಿಸಿ) ನೌಕರರಿಗೆ 2021ರ ಜನವರಿ 01 ರಿಂದ 2023ರ ಫೆಬ್ರವರಿ 28ರವರೆಗಿನ ಒಟ್ಟು 26 ತಿಂಗಳ ವೇತನ ಹಿಂಬಾಕಿ ಪಾವತಿಗೆ ಸರ್ಕಾರ ಈ ಹಿಂದೆಯೇ ಅನುಮೋದನೆ ನೀಡಿತ್ತು.
ಒಟ್ಟು 1271.92 ಕೋಟಿ ರೂ. ಮೊತ್ತದ ಹಿಂಬಾಕಿಯಲ್ಲಿ, ಇದೀಗ ವಿಳಂಬ ಮಾಡದೇ ಮೊದಲ ಕಂತಾಗಿ 450.00 ಕೋಟಿ ರೂ.ಗಳನ್ನು ಆಯಾ ನಿಗಮವಾರು ಬಿಡುಗಡೆಗೊಳಿಸಿ ಆದೇಶ ಹೊರಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



