ಬೆಂಗಳೂರು: ಪ್ರಧಾನಿ ಮೋದಿ ಸಾಗುತ್ತಿದ್ದ ಮಾರ್ಗದಲ್ಲಿ ಟೈಮರ್ ಪತ್ತೆ! ದೊಡ್ಡ ಸಂಚಿನ ಶಂಕೆ
ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತಿತರ ಕೇಂದ್ರ ಸಂಸ್ಥೆಗಳು, ರಾಜ್ಯ ಗುಪ್ತಚರ ಸಂಸ್ಥೆಯೊಂದಿಗೆ ಸೇರಿ ಈ ವಿಷಯವನ್ನು ತನಿಖೆ ಮಾಡಲು ಪ್ರಾರಂಭಿಸಿದವು.

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಸಾಗುತ್ತಿದ್ದ ಮಾರ್ಗದ ಬಳಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಕಾರ್ಡ್‌ಬೋರ್ಡ್ ಬಾಕ್ಸ್‌ನಲ್ಲಿ ಜಿಲೆಟಿನ್ ಕಡ್ಡಿ ಜೊತೆಗೆ ಬೆಂಕಿ ಪೊಟ್ಟಣ, ಕರ್ಪೂರ, ಬ್ಯಾಟರಿ ಮತ್ತು ಟೈಮರ್ ಸರ್ಕ್ಯೂಟ್ ಪತ್ತೆಯಾಗಿದೆ. ಭದ್ರತಾ ತಪಾಸಣೆಯ ವೇಳೆ ಇವು ಪತ್ತೆಯಾಗಿದ್ದು, ದೊಡ್ಡ ಸಂಚಿನ ಶಂಕೆ ವ್ಯಕ್ತವಾಗಿದೆ.
ಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತಿತರ ಕೇಂದ್ರ ಸಂಸ್ಥೆಗಳು, ರಾಜ್ಯ ಗುಪ್ತಚರ ಸಂಸ್ಥೆಯೊಂದಿಗೆ ಸೇರಿ ಈ ವಿಷಯವನ್ನು ತನಿಖೆ ಮಾಡಲು ಪ್ರಾರಂಭಿಸಿದವು. ಪ್ರಧಾನಿ ಆಗಮನಕ್ಕೆ ಕೇವಲ 30 ನಿಮಿಷಗಳ ಮುಂಚೆ ಪೊಲೀಸ್ ಪ್ರಧಾನಿ ಮೋದಿ ಸಾಗುತ್ತಿದ್ದ ಮಾರ್ಗದಿಂದ 20 ಅಡಿ ದೂರದಲ್ಲಿ ಕಾರ್ಡ್ ಬೋರ್ಡ್ ಬಾಕ್ಸ್ ಬಿದ್ದಿರುವುದನ್ನು ಪೊಲೀಸರೊಬ್ಬರು ಗಮನಿಸಿದ ನಂತರ ಇದು ಬೆಳಕಿಗೆ ಬಂದಿತು.
ಈ ಸಬಂಧ ಕಗ್ಗಲೀಪುರ ಠಾಣೆ ವ್ಯಾಪ್ತಿಯಲ್ಲಿ ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆಗಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ. ಆದಾಗ್ಯೂ ವಶಕ್ಕೆ ಪಡೆದ ವಸ್ತುಗಳು ತಕ್ಷಣದ ಸ್ಫೋಟಕ್ಕೆ ಯೋಗ್ಯ ಸ್ಥಿತಿಯಲ್ಲಿಲ್ಲ ಎಂದು ತನಿಖೆಯ ಭಾಗವಾಗಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಜಿಲೆಟಿನ್ ಕಡ್ಡಿಗಳನ್ನು ಯಾರು ಇಟ್ಟರು ಎಂಬುದನ್ನು ಕಂಡುಹಿಡಿಯಲು ಪೊಲೀಸರು ಮಾರ್ಗದುದ್ದಕ್ಕೂ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸುತ್ತಿದ್ದಾರೆ.
ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಈ ಹಂತದಲ್ಲಿ ನಾನು ವಿವರಗಳನ್ನು ಹಂಚಿಕೊಳ್ಳಲು ಬಯಸುವುದಿಲ್ಲ. ವಂಚನೆ ಬೆದರಿಕೆ ಕರೆಗೆ ಸಂಬಂಧಿಸಿದಂತೆ, ಒಬ್ಬ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಜಿಲೆಟಿನ್ ಕಡ್ಡಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಘಟನೆಯ ತನಿಖೆ ನಡೆಸಲು ಎನ್ಐಎ ಕೋರಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ. ಅವರು ಕೇಳಿದರೆ, ನಾವು ಸಹಕರಿಸುತ್ತೇವೆ ಮತ್ತು ತನಿಖೆಗೆ ಅವಕಾಶ ನೀಡುತ್ತೇವೆ ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ತೆರಳುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿ ಪತ್ತೆ: ಬೆಂಗಳೂರಿಗೆ ದೌಡಾಯಿಸಿದ NIA; ಓರ್ವ ಆರೋಪಿಯ ಬಂಧನ!
ರಾಜ್ಯ ಮತ್ತು ಕೇಂದ್ರ ಸಂಸ್ಥೆಗಳು ಪ್ರಧಾನಿಯವರ ಕಾರ್ಯಕ್ರಮಕ್ಕೆ ಉನ್ನತ ಮಟ್ಟದ ಭದ್ರತೆಯನ್ನು ಒದಗಿಸಿವೆ. ಸಂಭಾವ್ಯ ಭಯೋತ್ಪಾದನಾ ಸಂಪರ್ಕದ ಕುರಿತು, "ನನಗೆ ಗೊತ್ತಿಲ್ಲ. ತನಿಖೆ ಪೂರ್ಣಗೊಳ್ಳುವವರೆಗೆ ಏನನ್ನೂ ಹೇಳಲಾಗುವುದಿಲ್ಲ. ತನಿಖೆ ಮುಗಿದ ನಂತರವೇ ನಾವು ಪ್ರತಿಕ್ರಿಯಿಸಬಹುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


