ಚನ್ನಗಿರಿಯಲ್ಲಿ ದುರಂತ: ಈಜಲು ತೆರಳಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು..!
BIET ಕಾಲೇಜಿನ 10 ವಿದ್ಯಾರ್ಥಿಗಳ ಗುಂಪು ಬಸವಪಟ್ಟಣದ ದೇವಸ್ಥಾನ ಪ್ರವಾಸಕ್ಕೆ ತೆರಳಿತ್ತು. ಬಳಿಕ ಭದ್ರಾ ಬಲದಂಡೆ ಕಾಲುವೆಯಲ್ಲಿ ನೀರು ಹರಿಯುತ್ತಿರುವುದನ್ನು ಗಮನಿಸಿದ ಕೆಲ ವಿದ್ಯಾರ್ಥಿಗಳು ಈಜಲು ಇಳಿದಿದ್ದಾರೆ.

ಚನ್ನಗಿರಿ (ದಾವಣಗೆರೆ): ಈಜಲು ಭದ್ರಾ ಕಾಲುವೆಗೆ ಇಳಿದಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಗುರುವಾರ ಚನ್ನಗಿರಿ ತಾಲ್ಲೂಕಿನ ಮರಬನಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ವಿವೇಕ್ ಮತ್ತು ಮಾನಸಿ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಸಿಬ್ಬಂದಿ ವಿವೇಕ್ ಅವರ ಶವವನ್ನು ಪತ್ತೆಹಚ್ಚಿದ್ದು, ಮಾನಸಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಪೊಲೀಸ್ ಮಾಹಿತಿಯ ಪ್ರಕಾರ, BIET ಕಾಲೇಜಿನ 10 ವಿದ್ಯಾರ್ಥಿಗಳ ಗುಂಪು ಬಸವಪಟ್ಟಣದ ದೇವಸ್ಥಾನ ಪ್ರವಾಸಕ್ಕೆ ತೆರಳಿತ್ತು. ಬಳಿಕ ಭದ್ರಾ ಬಲದಂಡೆ ಕಾಲುವೆಯಲ್ಲಿ ನೀರು ಹರಿಯುತ್ತಿರುವುದನ್ನು ಗಮನಿಸಿದ ಕೆಲ ವಿದ್ಯಾರ್ಥಿಗಳು ಈಜಲು ಇಳಿದಿದ್ದಾರೆ.
ಈ ವೇಳೆ ಮಾನಸಿ ಕಾಲು ಜಾರಿ ನೀರಿನಲ್ಲಿ ಮುಳುಗಿದ್ದು, ಆಕೆಯನ್ನು ರಕ್ಷಿಸಲು ಇತರ ವಿದ್ಯಾರ್ಥಿಗಳು ಮಾನವ ಸರಪಳಿ ರೂಪಿಸಿ ಪ್ರಯತ್ನಿಸಿದ್ದಾರೆ. ಆದರೆ, ಸರಪಳಿಯ ಕೊನೆಯಲ್ಲಿ ಇದ್ದ ವಿವೇಕ್ ಕೂಡ ಸಮತೋಲನ ಕಳೆದುಕೊಂಡು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಬಸವಪಟ್ಟಣ ಪೊಲೀಸ್ ಠಾಣೆಯ ಪಿಎಸ್‌ಐ ಇಮ್ತಿಯಾಜ್ ಮಾಹಿತಿ ನೀಡಿದ್ದು, ವಿವೇಕ್ ಅವರ ಶವವನ್ನು ಪತ್ತೆಹಚ್ಚಲಾಗಿದೆ ಮತ್ತು ಮಾನಸಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಬಸವಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



