ರಾಜ್ಯ

ರೈತರು ಎರಡೇಟು ಹೊಡೆದರೂ, ನನ್ನ ಬಟ್ಟೆ ಹರಿದರೂ ಬಿಡದಿ ಟೌನ್‌ಶಿಪ್‌ ಮಾಡಿಯೇ ಸಿದ್ದ: ಡಿ.ಕೆ ಶಿವಕುಮಾರ್

ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಮಾಡಿದ್ದ ಯೋಜನೆಯನ್ನೇ ನಾವು ಮುಂದುವರಿಸುತ್ತಿದ್ದೇವೆ. ಅಗತ್ಯವಿಲ್ಲ ಎಂದಾಗಿದ್ದರೆ ಕುಮಾರಸ್ವಾಮಿ ಏಕೆ ಭೂಮಿಯನ್ನು ಡಿನೋಟಿಫೈ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ರೈತರು ಎರಡೇಟು ಹೊಡೆದರೂ, ನನ್ನ ಬಟ್ಟೆ ಹರಿದರೂ ಬಿಡದಿ ಟೌನ್‌ಶಿಪ್‌ ಮಾಡಿಯೇ ಸಿದ್ದ: ಡಿ.ಕೆ ಶಿವಕುಮಾರ್
ಡಿ ಕೆ ಶಿವಕುಮಾರ್
Published On :

ಬೆಂಗಳೂರು: ರೈತರು ಎರಡೇಟು ಹೊಡೆದರೂ, ನನ್ನ ಬಟ್ಟೆ ಹರಿದರೂ ಬಿಡದಿ ಟೌನ್‌ಶಿಪ್‌ ಮಾಡಿಯೇ ಸಿದ್ದ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬಿಡದಿ ಟೌನ್‌ಶಿಪ್‌ಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ವಿರೋಧಕ್ಕೆ ಸಂಬಂಧಪಟ್ಟಂತೆ ನಿನ್ನೆ ಮಾಧ್ಯಮ ಪ್ರತಿನಿಧಿಗಳು ಪ್ರಶ್ನೆ ಕೇಳದಾಗ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗ ಮಾಡಿದ್ದ ಯೋಜನೆಯನ್ನೇ ನಾವು ಮುಂದುವರಿಸುತ್ತಿದ್ದೇವೆ. ಅಗತ್ಯವಿಲ್ಲ ಎಂದಾಗಿದ್ದರೆ ಕುಮಾರಸ್ವಾಮಿ ಏಕೆ ಭೂಮಿಯನ್ನು ಡಿನೋಟಿಫೈ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಬಟ್ಟೆ ಹರಿದರೂ ಬಿಡಲ್ಲ

ಯೋಜನೆಗೆ ಭೂಮಿ ಬಿಟ್ಟುಕೊಡುವಂತೆ ನಾನೇ ಖುದ್ದಾಗಿ ರೈತರ ಮನವೊಲಿಸುತ್ತೇನೆ. ಸಮಯ, ದಿನಾಂಕ ಗೊತ್ತುಪಡಿಸಿ ರೈತರ ಮುಂದೆ ಹೋಗುತ್ತೇನೆ. ರೈತರು ನನಗೆ ಎರಡೇಟು ಹೊಡೆಯಬಹುದು ಅಷ್ಟೇ ತಾನೇ? ಬಟ್ಟೆ ಹರಿಯಬಹುದು, ಕಲ್ಲೆಸೆಯಬಹುದು, ಧಿಕ್ಕಾರ ಹಾಕಬಹುದು. ಎಲ್ಲವನ್ನೂ ಎದುರಿಸಲು ಸಿದ್ಧನಿದ್ದೇನ ಎಂದು ಡಿಸಿಎಂ ಹೇಳಿದರು.

ಮುಂದಿನ ದಿನಗಳಲ್ಲಿ ಈ ರೈತರು ಮತ್ತು ಅವರ ಮಕ್ಕಳ ಭವಿಷ್ಯ ಮುಖ್ಯ. ಮುಂದಿನ 20 ವರ್ಷಗಳ ನಂತರ ಬಿಡದಿ ಮತ್ತು ಬೆಂಗಳೂರು ದಕ್ಷಿಣದ ಜನರು ನನ್ನ ಕೆಲಸವನ್ನು ನೆನಪಿಸಿಕೊಳ್ಳುತ್ತಾರೆ. ಭೂಮಿಯನ್ನು ಡಿನೋಟಿಫೈ ಮಾಡಲು ನಾನಂತೂ ತಯಾರಿಲ್ಲ ಎಂದು ತಿಳಿಸಿದರು.

ಭೂ ಗ್ಯಾರಂಟಿ

ಜನಸಾಮಾನ್ಯರು ಸಂಪಾದಿಸಿದ ಆಸ್ತಿಗಳಿಗೆ ಸರಿಯಾದ ರೀತಿಯಲ್ಲಿ ದಾಖಲೆಗಳನ್ನು ಒದಗಿಸಿಕೊಡಬೇಕು ಎಂದು ಆರನೇ ಗ್ಯಾರಂಟಿಯಾಗಿ 'ಭೂಮಿ ಗ್ಯಾರಂಟಿ' ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಜನರ ಮನೆ ಬಾಗಿಲಿಗೆ ಇ-ಖಾತೆಗಳನ್ನು ತಲುಪಿಸುವ ವ್ಯವಸ್ಥೆ ಮಾಡಿದ್ದೇವೆ. 'ಬಿ' ಯಿಂದ 'ಎ' ಖಾತೆಗೆ ಬದಲಾವಣೆ ಮಾಡಿಕೊಡುತ್ತಿದ್ದೇವೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.