ರಾಜ್ಯ

ಯುನೆಸ್ಕೋ ಪಟ್ಟಿಯಲ್ಲಿ ಲಕ್ಕುಂಡಿ ಸೇರಿಸಲು ಸಿದ್ಧತೆ, ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಕೆ: ಸಚಿವ ಹೆಚ್.ಕೆ ಪಾಟೀಲ್

ಹಂಪಿಯಲ್ಲಿ 6,000 ಹಾಗೂ ಆಂಧ್ರ ಪ್ರದೇಶದ ವರಂಗಲ್‌ನಲ್ಲಿ 1,200 ಪುರಾತತ್ವ ಅವಶೇಷಗಳು ಪತ್ತೆಯಾಗಿವೆ. ಆದರೆ ಲಕ್ಕುಂಡಿಯಲ್ಲಿ ಇನ್ನೂ ಉತ್ಖನನ ಕಾರ್ಯ ಮುಂದುವರಿದರೆ, ಭಾರತದಲ್ಲೇ ಅತಿ ದೊಡ್ಡ ಐತಿಹಾಸಿಕ ಸಂಗ್ರಹ ಇಲ್ಲಿ ಪತ್ತೆಯಾಗುವ ಸಾಧ್ಯತೆ ಇದೆ.

ಯುನೆಸ್ಕೋ ಪಟ್ಟಿಯಲ್ಲಿ ಲಕ್ಕುಂಡಿ ಸೇರಿಸಲು ಸಿದ್ಧತೆ, ಶೀಘ್ರದಲ್ಲೇ ಪ್ರಸ್ತಾವನೆ ಸಲ್ಲಿಕೆ: ಸಚಿವ ಹೆಚ್.ಕೆ ಪಾಟೀಲ್
ಸಚಿವ ಹೆಚ್.ಕೆ.ಪಾಟೀಲ್
Published On :

ಗದಗ: ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣವಾಗಿ ಘೋಷಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಮಟ್ಟದ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ಎಚ್.ಕೆ. ಪಾಟೀಲ್ ಅವರು ಹೇಳಿದ್ದಾರೆ.

ಶನಿವಾರ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಲಕ್ಕುಂಡಿಯನ್ನು ವಿಶ್ವ ಪಾರಂಪರಿಕ ತಾಣವಾಗಿ ಘೋಷಿಸುವಂತೆ ಯುನೆಸ್ಕೋ ಮುಂದೆ ಪ್ರಸ್ತಾಪಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI)ಗೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಹೇಳಿದರು.

ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕ್ ಚಂದ್ರ ಮಾತನಾಡಿ, ಒಂದು ತಿಂಗಳೊಳಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಪ್ರಸ್ತುತ ಕರ್ನಾಟಕದ ಹಂಪಿ, ಬೇಲೂರು, ಹಳೆಬೀಡು, ಪಟ್ಟದಕಲ್ಲು ಹಾಗೂ ಪಶ್ಚಿಮ ಘಟ್ಟ ಪ್ರದೇಶಗಳು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ.

ಲಕ್ಕುಂಡಿಯಲ್ಲಿ ಇದುವರೆಗೆ ಸುಮಾರು 3,000 ಪುರಾತತ್ವ ಅವಶೇಷಗಳು ಪತ್ತೆಯಾಗಿದ್ದು, 16 ದೇವಾಲಯಗಳನ್ನು ಸಂರಕ್ಷಿತ ಸ್ಮಾರಕಗಳಾಗಿ ಘೋಷಿಸಲಾಗಿದೆ.

ಹಂಪಿಯಲ್ಲಿ 6,000 ಹಾಗೂ ಆಂಧ್ರ ಪ್ರದೇಶದ ವರಂಗಲ್‌ನಲ್ಲಿ 1,200 ಪುರಾತತ್ವ ಅವಶೇಷಗಳು ಪತ್ತೆಯಾಗಿವೆ. ಆದರೆ ಲಕ್ಕುಂಡಿಯಲ್ಲಿ ಇನ್ನೂ ಉತ್ಖನನ ಕಾರ್ಯ ಮುಂದುವರಿದರೆ, ಭಾರತದಲ್ಲೇ ಅತಿ ದೊಡ್ಡ ಐತಿಹಾಸಿಕ ಸಂಗ್ರಹ ಇಲ್ಲಿ ಪತ್ತೆಯಾಗುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟರು.

ಇತ್ತೀಚಿನ ವರ್ಷಗಳಲ್ಲಿ ಒಂದೇ ಸ್ಥಳದಲ್ಲಿ ಇಷ್ಟು ದೊಡ್ಡ ಪ್ರಮಾಣದ ಪುರಾತತ್ವ ಸಂಗ್ರಹ ಮತ್ತು ಐತಿಹಾಸಿಕ ಅವಶೇಷಗಳ ಪತ್ತೆಯಾಗಿರುವುದು ಅಪರೂಪವಾಗಿದೆ. ಮುಂದಿನ ವರ್ಷಗಳಲ್ಲಿ ಕರ್ನಾಟಕ ಸರ್ಕಾರ 100 ದೇವಾಲಯಗಳನ್ನು ಸಂರಕ್ಷಿಸಿ ಅನಾವರಣಗೊಳಿಸುವ ಗುರಿ ಹೊಂದಿದೆ ಎಂದು ತಿಳಿಸಿದರು.

ಲಕ್ಕುಂಡಿಯಲ್ಲಿ ಸುಮಾರು 600 ವರ್ಷ ಹಳೆಯದಾದ 460 ಗ್ರಾಂ ಚಿನ್ನ ಪತ್ತೆಯಾಗಿದ್ದು, ಅದರ ಮೌಲ್ಯ ರೂ.8 ಕೋಟಿಗೂ ಅಧಿಕವಾಗಿದೆ ಎಂದು ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.