'ಒಂದು ದೇಶ, ಒಂದು ಚುನಾವಣೆ’ ಆಡಳಿತವನ್ನು ಬಲಪಡಿಸಿ ಅನಿಶ್ಚಿತತೆ ಕಡಿಮೆ ಮಾಡುತ್ತದೆ': JPC ಮುಖ್ಯಸ್ಥ ಪಿ.ಪಿ ಚೌಧರಿ
ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಮುಂದಿಟ್ಟಿದೆ. ದೇಶದ ಹಿತದೃಷ್ಟಿಯಿಂದ ಎಲ್ಲಾ ರಾಜಕೀಯ ಪಕ್ಷಗಳು ಈ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಲು ಸಹಕರಿಸಬೇಕು ಎಂದು ಹೇಳಿದರು.

ಬೆಂಗಳೂರು: ಸಂವಿಧಾನ (129ನೇ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾನೂನುಗಳು (ತಿದ್ದುಪಡಿ) ಮಸೂದೆ, 2024 ಕುರಿತ ಸಂಯುಕ್ತ ಸಂಸದೀಯ ಸಮಿತಿ (JPC) ಅಧ್ಯಕ್ಷ ಪಿ.ಪಿ ಚೌಧರಿ ‘ಒಂದು ದೇಶ, ಒಂದು ಚುನಾವಣೆ’ ನಡೆಸಬೇಕೆಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರ ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಮುಂದಿಟ್ಟಿದೆ. ದೇಶದ ಹಿತದೃಷ್ಟಿಯಿಂದ ಎಲ್ಲಾ ರಾಜಕೀಯ ಪಕ್ಷಗಳು ಈ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಲು ಸಹಕರಿಸಬೇಕು ಎಂದು ಹೇಳಿದರು.
ಪ್ರಾದೇಶಿಕ ಮಟ್ಟದ ಸಮಾಲೋಚನೆ ಮುಂದುವರಿಸುವ ಉದ್ದೇಶದಿಂದ ಜೆಪಿಸಿ ಅಧ್ಯಯನ ಪ್ರವಾಸದ ಭಾಗವಾಗಿ ಪಿ.ಪಿ ಚೌಧರಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ವಿಧಾನಸಭಾಧ್ಯಕ್ಷರು, ಪರಿಷತ್ ಸಭಾಪತಿ, ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳ ಮುಖ್ಯಸ್ಥರು, ರಾಜ್ಯ ಆಡಳಿತ, ಹಣಕಾಸು ಮತ್ತು ಶಿಕ್ಷಣ ಸಂಸ್ಥೆಗಳು, ವೃತ್ತಿಪರ ಸಂಘಟನೆಗಳು ಹಾಗೂ ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.
ಈ ಮಸೂದೆ ಅಂಗೀಕರಿಸಲು ಸಂಸತ್ತಿನಲ್ಲಿ ಮೂರನೇ ಎರಡು ಭಾಗ ಬಹುಮತ ಅಗತ್ಯವಿದೆ. ಎನ್ ಡಿಎಗೆ ಇತರ ಪಕ್ಷಗಳ ಸಹಕಾರವೂ ಸಿಗಲಿದೆ ಎಂದು ನಾನು ಆಶಿಸುತ್ತೇನೆ. ಆಗ ಮಾತ್ರ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು.
ಪ್ರತ್ಯೇಕ ಚುನಾವಣೆಗಳು ವಿದೇಶಿ ನೇರ ಹೂಡಿಕೆ (FDI) ಮತ್ತು ವಿದೇಶಿ ಪೋರ್ಟ್‌ಫೋಲಿಯೊ ಹೂಡಿಕೆ (FPI) ಮೇಲೂ ಪರಿಣಾಮ ಬೀರುತ್ತವೆ ಎಂದು ಚೌಧರಿ ಅಭಿಪ್ರಾಯಪಟ್ಟರು.
ಕೇಂದ್ರ ಅಥವಾ ರಾಜ್ಯಗಳಲ್ಲಿ ಮುಂದಿನ ಸರ್ಕಾರ ಯಾವುದು ಎಂಬ ನಿರಂತರ ಅನಿಶ್ಚಿತತೆಯಿಂದ ಹೂಡಿಕೆದಾರರು ಹಿಂಜರಿಯುತ್ತಾರೆ. ಹೀಗಾಗಿ ಅವರು ತಮ್ಮ ಹೂಡಿಕೆಯನ್ನು ಭಾರತ ಬದಲು ಬೇರೆ ದೇಶಗಳಿಗೆ ವರ್ಗಾಯಿಸಬಹುದು. ಹಣಕಾಸು, ಆಡಳಿತ ಅಥವಾ ಮಕ್ಕಳ ಶಿಕ್ಷಣ ಯಾವುದೇ ದೃಷ್ಟಿಯಿಂದ ನೋಡಿದರೂ ಪ್ರತ್ಯೇಕ ಚುನಾವಣೆಗಳಿಂದ ದೇಶಕ್ಕೆ ಭಾರೀ ನಷ್ಟವಾಗುತ್ತಿದೆ ಎಂದು ಹೇಳಿದರು.
ಸರಿಯಾದ ಸಮಯದಲ್ಲಿ ಎಲ್ಲರಿಂದಲೂ ಆಕ್ಷೇಪಣೆಗಳನ್ನು ಆಹ್ವಾನಿಸುತ್ತೇವೆ. ಅವುಗಳನ್ನು ಪರಿಶೀಲಿಸಿ, ಎಲ್ಲರ ಅಭಿಪ್ರಾಯಗಳನ್ನು ಮೌಲ್ಯಮಾಪನ ಮಾಡಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಸ್ಥಳೀಯ ಸಂಸ್ಥೆಗಳ ರಾಮನಾಥ್ ಕೋವಿಂದ್ ಸಮಿತಿ ವರದಿಯನ್ನು ಉಲ್ಲೇಖಿಸಿದರು. ಸಂವಿಧಾನ ತಿದ್ದುಪಡಿಯ ಬಳಿಕ ‘Local Bodies’ ಎಂಬ ಪದವನ್ನು ‘Institutions of Self-Government’ ಎಂದು ಬದಲಿಸಲಾಗಿದೆ. ಅವು ಪಂಚಾಯತ್ ಮಟ್ಟದಲ್ಲಿರಲಿ ಅಥವಾ ನಗರಸಭೆ ಮಟ್ಟದಲ್ಲಿರಲಿ — ಲೋಕಸಭೆ ಮತ್ತು ವಿಧಾನಸಭೆಗಳ ಏಕಕಾಲದ ಚುನಾವಣೆಯ ಬಳಿಕ 100 ದಿನಗಳೊಳಗೆ ಈ ಸ್ವಯಂ ಆಡಳಿತ ಸಂಸ್ಥೆಗಳ ಚುನಾವಣೆ ನಡೆಸಬೇಕು ಎಂಬುದನ್ನು ಮಸೂದೆಯಲ್ಲಿ ಸೇರಿಸಲಾಗಿದೆ ಎಂದು ವಿವರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



